ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ ಮೇಲಿಂದ ಜಿಗಿದು ವೈದ್ಯ ಆತ್ಮಹತ್ಯೆ

ವಿವೇಕ್‌ ಕೌಟುಂಬಿಕ ಕಲಹದಿಂದ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದರು. ಜತೆಗೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು. ಮಂಗಳವಾರ ಮಧ್ಯಾಹ್ನ ಅಪಾರ್ಟ್‌ಮೆಂಟ್‌ ಫ್ಲ್ಯಾಟ್‌ ಖರೀದಿ ಸೋಗಿನಲ್ಲಿ ವಿವೇಕ್‌ ಸ್ಥಳಕ್ಕೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ ಮೇಲಿಂದ ಜಿಗಿದು ವೈದ್ಯ ಆತ್ಮಹತ್ಯೆ
Linkup
: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವೇಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋರಮಂಗಲ ನಿವಾಸಿ 60 ವರ್ಷ ವಯಸ್ಸಿನ ವಿವೇಕ್‌ ಮಧುಸೂದನ್‌ ಆತ್ಮಹತ್ಯೆಗೆ ಶರಣಾದ . ವಿವೇಕ ನಗರದ ನಿರ್ಮಾಣ ಹಂತದ 'ಜಿ- ಕಾರ್ಪೊರೇಷನ್‌ ರೆಸಿಡೆನ್ಸಿ' ಅಪಾರ್ಟ್‌ಮೆಂಟ್‌ನ 15 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ವಿವೇಕ್‌ ಕೌಟುಂಬಿಕ ಕಲಹದಿಂದ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದರು. ಜತೆಗೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು. ಮಂಗಳವಾರ ಮಧ್ಯಾಹ್ನ ಅಪಾರ್ಟ್‌ಮೆಂಟ್‌ ಫ್ಲ್ಯಾಟ್‌ ಖರೀದಿ ಸೋಗಿನಲ್ಲಿ ವಿವೇಕ್‌ ಸ್ಥಳಕ್ಕೆ ಬಂದಿದ್ದರು. ಈ ವೇಳೆ 15 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪರಿಶೀಲನೆ ನಡೆಸಿದ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.