ಬಿಜೆಪಿ ಅಷ್ಟೇ ಅಲ್ಲ ಜೆಡಿಎಸ್‌ ವಿರುದ್ಧನೂ ಧ್ವನಿ ಎತ್ತಿ! ರಾಜ್ಯ ಕಾಂಗ್ರೆಸ್ ಮುಖಂಡರಿಗೆ ರಾಹುಲ್ ಗಾಂಧಿ ಸೂಚನೆ

ಬಿಜೆಪಿ ವಿರುದ್ಧ ಮಾತ್ರ ಅಷ್ಟೇ ಅಲ್ಲ ಜೆಡಿಎಸ್‌ ವಿರುದ್ಧನೂ ಧ್ವನಿ ಎತ್ತಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಗುರುವಾರ ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಬಿಜೆಪಿ ಅಷ್ಟೇ ಅಲ್ಲ ಜೆಡಿಎಸ್‌ ವಿರುದ್ಧನೂ ಧ್ವನಿ ಎತ್ತಿ! ರಾಜ್ಯ ಕಾಂಗ್ರೆಸ್ ಮುಖಂಡರಿಗೆ ರಾಹುಲ್ ಗಾಂಧಿ ಸೂಚನೆ
Linkup
ಹೊಸದಿಲ್ಲಿ: ಬಿಜೆಪಿ ವಿರುದ್ಧ ಮಾತ್ರವಲ್ಲ ಜೆಡಿಎಸ್‌ ವಿರುದ್ಧವೂ ಧ್ವನಿ ಎತ್ತಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಗುರುವಾರ ಸಂಜೆ ರಾಜ್ಯ ಕಾಂಗ್ರೆಸ್ ಮುಖಂಡರ ಜೊತೆ ರಾಹುಲ್ ಗಾಂಧಿ ಸಭೆ ನಡೆಸಿದರು. ಸಭೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ರಾಜ್ಯದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಹೋರಾಟಕ್ಕೆ ರಾಹುಲ್ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಜೆಡಿಎಸ್‌ ವಿರುದ್ಧವೂ ಗಟ್ಟಿಯಾಗಿ ಧ್ವನಿ ಎತ್ತಿ ಎಂದು ರಾಹುಲ್ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದರ ಜೊತೆಗೆ ಮೇಕೆದಾಟು ಯೋಜನೆ ಜಾರಿಗಾಗಿ ನಡೆಸುತ್ತಿರುವ ಹೋರಾಟ ಹಾಗೂ ಉಭಯ ಸದನದಲ್ಲಿ ರಾಷ್ಟ್ರಧ್ವಜ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ನಡೆಸಿದ್ದ ಹೋರಾಟದ ಬಗ್ಗೆ ರಾಹುಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ತಂತ್ರಗಾರಿಕೆಗೆ ಎಚ್ಚರಿಕೆಯಿಂದ ಉತ್ತರ ನೀಡಿ! ಇನ್ನು ರಾಜ್ಯದ ಸದ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡ ರಾಹುಲ್ ಗಾಂಧಿ ಬಿಜೆಪಿ ತಂತ್ರಗಾರಿಕೆಗೆ ಎಚ್ಚರಿಕೆಯಿಂದ ಉತ್ತರ ನೀಡಿ ಎಂಬ ಸಲಹೆಯನ್ನು ರಾಜ್ಯದ ಮುಖಂಡರಿಗೆ ನೀಡಿದ್ದಾರೆ. ರಾಜ್ಯದಲ್ಲಿ ಕೋಮು ಆಧಾರಿತ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಸಂದರ್ಭದಲ್ಲಿ ಇದು ತೀವ್ರವಾಗುವ ಸಾಧ್ಯತೆ ಇರುವುದರಿಂದ ಸೂಕ್ಷ್ಮವಾಗಿ ನಿಭಾಯಿಸಿ. ಬಿಜೆಪಿ ಅಸ್ತ್ರಕ್ಕೆ ಜನಪರವಾಗಿರುವ ಕಾರ್ಯಕ್ರಮಗಳನ್ನು ರೂಪಿಸಿ ಹಾಗೂ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಕಾರ್ಯತಂತ್ರ ರೂಪಿಸಿ ಎಂಬ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ರಾಹುಲ್‌ಗೆ ರಾಜ್ಯ ಭೇಟಿಗೆ ಆಹ್ವಾನ ನೀಡಿದ ಕೈ ಮುಖಂಡರು ಇನ್ನು ರಾಹುಲ್ ಗಾಂಧಿಯ ಭೇಟಿಯ ಸಂದರ್ಭದಲ್ಲಿ ರಾಜ್ಯಕ್ಕೆ ಆಗಮಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡರು ಆಹ್ವಾನ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಆಹ್ವಾನ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ.