ಬಿಜೆಪಿ ಪ್ರಚಾರಕ್ಕೆ ಹೊರಗಿನವರನ್ನು ಕರೆಸಿದ್ದೇ ಕೋವಿಡ್‌ ಹೆಚ್ಚಳಕ್ಕೆ ಕಾರಣ: ಮಮತಾ ಬ್ಯಾನರ್ಜಿ

ಬಿಜೆಪಿ ಚುನಾವಣಾ ಪ್ರಚಾರಕ್ಕೆ ಹೊರಗಿನವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತಂದ ಕಾರಣ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದ್ದಾರೆ.

ಬಿಜೆಪಿ ಪ್ರಚಾರಕ್ಕೆ ಹೊರಗಿನವರನ್ನು ಕರೆಸಿದ್ದೇ ಕೋವಿಡ್‌ ಹೆಚ್ಚಳಕ್ಕೆ ಕಾರಣ: ಮಮತಾ ಬ್ಯಾನರ್ಜಿ
Linkup
ಕೋಲ್ಕತ: ಭಾರತೀಯ ಜನತಾ ಪಕ್ಷವು (ಬಿಜೆಪಿ) ಚುನಾವಣಾ ಪ್ರಚಾರಕ್ಕೆ ಹೊರಗಿನವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತಂದಿರುವ ಕಾರಣ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿವೆ ಎಂದು ಮುಖ್ಯಮಂತ್ರಿ ಬುಧವಾರ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ರ‍್ಯಾಲಿ ಉದ್ದೇಶಿಸಿ ಮಮತಾ ಬ್ಯಾನರ್ಜಿ ಮಾತನಾಡಿದರು. ರಾಜ್ಯದ ಬಹುಪಾಲು ಜನರಿಗೆ ಲಸಿಕೆ ನೀಡುವಂತೆ ಕೇಂದ್ರ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಈ ಮನವಿಗೆ ಸ್ಪಂದಿಸುತ್ತಿಲ್ಲ. ಸರಿಯಾದ ರೀತಿಯಲ್ಲಿ ಲಸಿಕೆ ನೀಡದ ಕಾರಣ ಕೊರೊನಾ ಸೋಂಕು ಹೆಚ್ಚು ಹರಡುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಹೊರಗಿನವರನ್ನು ಕರೆ ತಂದಿದ್ದಾರೆ. ಇದರಿಂದ ಕೋವಿಡ್ ಪ್ರಕರಣಗಳು ಜಾಸ್ತಿಯಾಗಿವೆ. ನಾವು ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದರೆ, ಅವರು (ಬಿಜೆಪಿ) ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರರದಲ್ಲಿ ಪಾಲ್ಗೊಳ್ಳಲು ಚುನಾವಣಾ ಆಯೋಗ 24 ಗಂಟೆಗಳ ಕಾಲ ನಿಷೇಧ ಹೇರಿರುವ ಕುರಿತು ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದರು. ಹಿಂದೂಗಳು, ಮುಸ್ಲಿಮರು ಮತ್ತು ಇತರರಲ್ಲಿ ಒಟ್ಟಾಗಿ ಮತ ಚಲಾಯಿಸುವಂತೆ ಕೇಳಿಕೊಳ್ಳುವುದು ತಪ್ಪೇ? ಪ್ರತಿ ಚುನಾವಣಾ ಸಭೆಯಲ್ಲಿ ನನ್ನನ್ನು ಅಪಹಾಸ್ಯ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.