ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್ ಹತ್ಯೆ, ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ!

ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್ ಹತ್ಯೆ ನಡೆದಿದೆ. ನಗರದ ಛಲವಾದಿಪಾಳ್ಯದಲ್ಲಿ ಈ ಘಟನೆ ನಡೆದಿದ್ದು ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್ ಹತ್ಯೆ, ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ!
Linkup
ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಹತ್ಯೆ ಅವರನ್ನು ಗುರುವಾರ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದ್ದು ತೀವ್ರವಾಗಿ ಗಾಯಗೊಂಡಿದ್ದ ರೇಖಾ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರೇಖಾ ಕದಿರೇಶ್ ಅವರು ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್‌ ಆಗಿದ್ದರು. 2018 ಫೆಬ್ರವರಿ 8 ರಂದು ರೇಖಾ ಪತಿಯ ಹತ್ಯೆ ನಡೆದಿತ್ತು. ಇದೀಗ ರೇಖಾ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಗುರುವಾರ ಬೆಳಗ್ಗೆ ತಮ್ಮ ಕಚೇರಿಯಲ್ಲಿ ಇದ್ದ ರೂಪಾ ಅವರನ್ನು ಅಲ್ಲಿಂಗ ಹೊರಗಡೆ ಕರೆದು ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಪರಿಚಯಸ್ಥರಿಂದಲೇ ಈ ಹತ್ಯೆ ನಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಬೆಳಗ್ಗೆ 9.30 ಕ್ಕೆ ಹತ್ಯೆ ಈ ಕೃತ್ಯ ನಡೆದಿದ್ದು ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ನೇತೃತ್ವದ ಪೊಲೀಸರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ವೈಯಕ್ತಿಕ ವೈಷಮ್ಯ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. 2018 ರಲ್ಲಿ ರೇಖಾ ಅವರ ಪತಿ ಕದಿರೇಶ್ ಅವರನ್ನು ಕೂಡಾ ಇದೇ ರೀತಿ ಹತ್ಯೆ ಮಾಡಲಾಗಿತ್ತು. ವ್ಯವಹಾರಿಕ ವೈಷಮ್ಯದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ಇದೀಗ ರೇಖಾ ಕದಿರೇಶ್ ಅವರ ಹತ್ಯೆಯ ಹಿಂದೆ ಸ್ಟೀಫನ್, ರಾಬರ್ಟ್‌, ಸೂರ್ಯ ಎಂಬುವವರ ಬಗ್ಗೆ ಅನುಮಾನ ಕದಿರೇಶ್ ಅವರ ಸಹೋದರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಅವರೇ ಈ ಕೃತ್ಯ ಎಸಗಿದ್ದಾರಾ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.