ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿ, ಬೋಧಕರಿಗೆ ಕೊರೊನಾ ಲಸಿಕೆ

ಬಿಬಿಎಂಪಿಯ ಒಟ್ಟು 8 ವಲಯಗಳಲ್ಲಿನ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 59,179 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 31,147 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ 52.63% ಗುರಿ ತಲುಪಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿ, ಬೋಧಕರಿಗೆ ಕೊರೊನಾ ಲಸಿಕೆ
Linkup
: ವ್ಯಾಪ್ತಿಯಲ್ಲಿ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಮತ್ತಿತರೆ ಸಿಬ್ಬಂದಿಗೆ ಕೋವಿಡ್‌ ಲಸಿಕೀಕರಣ ವೇಗವಾಗಿ ಸಾಗುತ್ತಿದ್ದು, ಗುರುವಾರ ಜೂನ್‌ 8ರ ಹೊತ್ತಿಗೆ 51.12% ಮಂದಿಗೆ ವ್ಯಾಕ್ಸಿನ್‌ ಕೊಡಲಾಗಿದೆ. ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್.‌ ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಹೇಳಿಕೆ ನೀಡಿರುವ ಅವರು, ಬಿಬಿಎಂಪಿಯ ಒಟ್ಟು 8 ವಲಯಗಳಲ್ಲಿನ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 59,179 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 31,147 ವಿದ್ಯಾರ್ಥಿಗಳಿಗೆ ನೀಡಿ 52.63% ಗುರಿ ತಲುಪಲಾಗಿದೆ ಎಂದರು. ಹಾಗೆಯೇ, 3,076 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದು, ಈ ಪೈಕಿ 2,518 ಸಿಬ್ಬಂದಿಗೆ ಲಸಿಕೆ ನೀಡಿ 81.86% ಗುರಿ ತಲುಪಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು. ಬಿಬಿಎಂಪಿಯ ಎಂಟೂ ವಲಯಗಳಲ್ಲಿ ವಿದ್ಯಾರ್ಥಿಗಳ ಲಸಿಕೀಕರಣ ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ಸಾಗಿದ್ದು, ಆದಷ್ಟು ಬೇಗ ಲಸಿಕೀಕರಣ ಮುಗಿಸಲಾಗುವುದು ಎಂದಿರುವ ಡಿಸಿಎಂ, ಈವರೆಗೂ ಲಸಿಕೆ ಪಡೆಯದ ವಿದ್ಯಾರ್ಥಿಗಳು ತಪ್ಪದೇ ತಮ್ಮ ಕಾಲೇಜುಗಳಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.