ಬೆರಳ ತುದಿಯಲ್ಲಿ ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ; ಬಿ.ಎಸ್‌.ಯಡಿಯೂರಪ್ಪ

ರಾಜ್ಯ ಸರಕಾರದ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್‌ ವಾರಿಯರ್ಸ್‌ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತ ಆದ್ಯತೆಯ ಮೇರೆಗೆ ಕೋವಿಡ್‌ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮನಿಧಿಗೆ 5 ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆರಳ ತುದಿಯಲ್ಲಿ ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ; ಬಿ.ಎಸ್‌.ಯಡಿಯೂರಪ್ಪ
Linkup
ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರವನ್ನು ಮರೆಯಬಾರದೆಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಗುರುವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ. ಕೋವಿಡ್‌ 2ನೇ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್‌‍ನಿಂದ ಮೃತಪಟ್ಟ 31 ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ.ಗಳ ನೆರವು ನೀಡಲಾಗಿದೆ ಎಂದು ಅವರು ನುಡಿದರು. ರಾಜ್ಯ ಸರಕಾರದ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್‌ ವಾರಿಯರ್ಸ್‌ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತ ಆದ್ಯತೆಯ ಮೇರೆಗೆ ಕೋವಿಡ್‌ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮನಿಧಿಗೆ 5 ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್‌. ಭೃಂಗೀಶ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ. ಪಿ.ಎಸ್‌. ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.