ಭಾರತ್ ಬಂದ್ ಪ್ರತಿಭಟನೆ ಎಫೆಕ್ಟ್: ಬೆಂಗಳೂರಿನ ಹಲವು ಕಡೆ ಟ್ರಾಫಿಕ್ ಜಾಮ್

ಕೇಂದ್ರ ಸರಕಾರದ ಮೂರು ಕೃಷಿ ಕಾಯಿದೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ಭಾಗವಾಗಿ ಸೋಮವಾರ ಕರೆ ನೀಡಿರುವ ಭಾರತ್‌ ಬಂದ್‌ ಹಿನ್ನಲೆ ರೈತರು ಪ್ರತಿಭಟನೆ ನಡೆಸುತ್ತಿದ್ದು ನಗರದ ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್ ಸರ್ಕಲ್ ಸುತ್ತಮುತ್ತ ಟ್ರಾಫಿಕ್ ಜಾಮ್ ನಿಂದ ಜನರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಭಾರತ್ ಬಂದ್ ಪ್ರತಿಭಟನೆ ಎಫೆಕ್ಟ್: ಬೆಂಗಳೂರಿನ ಹಲವು ಕಡೆ ಟ್ರಾಫಿಕ್ ಜಾಮ್
Linkup
ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನಗರದ ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್ ಸರ್ಕಲ್ ಸುತ್ತಮುತ್ತ ಟ್ರಾಫಿಕ್ ಜಾಮ್ ನಿಂದ ಜನರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಭಾರತ್ ಬಂದ್ ಗೆ ಬೆಂಗಳೂರಿನಲ್ಲಿ ಬೆಂಬಲ ಸಿಗದಿದ್ದರೂ ಹಲವು ಕಡೆಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದಿವೆ. ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಗೊರಗುಂಟ ಪಾಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ರೈತರು ಪ್ರತಿಭಟನಾ ಜಾಥಾ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಜನರು ಪರದಾಟ ನಡೆಸಬೇಕಾಗಿ ಬಂತು. ಭಾರತ್ ಬಂದ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.‌ ಹೀಗಿದ್ದರೂ ಪೊಲೀಸರು ವಾಹನ ದಟ್ಟನೆ ನಿಯಂತ್ರಣ ಮಾಡಲು ಪರದಾಡಿದರು.