ಮೇಕೆದಾಟು ಯೋಜನೆ: ಬಿಜೆಪಿ ನಾಯಕರ ಮೌನ ಪ್ರಶ್ನಿಸಿದ ಡಿಕೆ ಶಿವಕುಮಾರ್‌

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ದೆಹಲಿಯಲ್ಲಿ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದ್ದೆವು. ಆಗ ಬಿಜೆಪಿಯ ನಾಯಕರಾದ ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಅವರುಗಳೂ ಕೂಡ ನಮ್ಮ ಜತೆ ಪ್ರತಿಭಟನೆ ಮಾಡಿದ್ದರು ಎಂದಿದ್ದಾರೆ ಡಿಕೆ ಶಿವಕುಮಾರ್‌.

ಮೇಕೆದಾಟು ಯೋಜನೆ: ಬಿಜೆಪಿ ನಾಯಕರ ಮೌನ ಪ್ರಶ್ನಿಸಿದ ಡಿಕೆ ಶಿವಕುಮಾರ್‌
Linkup
ಹೊಸದಿಲ್ಲಿ: ಜಾರಿ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಮೌನವನ್ನು ಕೆಪಿಸಿಸಿ ಅಧ್ಯಕ್ಷ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ದ ಕಿಡಿಕಾರಿದರು. ನಾನು ಜಲ ಸಂಪನ್ಮೂಲ ಸಚಿವನಾಗಿದ್ದ ಸಮಯದಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಸಲ್ಲಿಸಿ, ಅದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ತದನಂತರ ಸಂಸತ್ತಿನ ಉಭಯ ಸದನಗಳಲ್ಲಿ ತಮಿಳುನಾಡಿನ ಸಂಸದರು ಪ್ರತಿಭಟನೆ ಮಾಡಿದ್ದರು. ನಾನು ದೆಹಲಿಗೆ ಬಂದು ಬಿಜೆಪಿಯ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿದ್ದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ದೆಹಲಿಯಲ್ಲಿ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದೆವು. ಆಗ ಬಿಜೆಪಿಯ ನಾಯಕರಾದ ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಇತರ ನಾಯಕರ ಜೊತೆ ಮಾತನಾಡಿದ್ದೆವು. ಆಗ ಅವರುಗಳೂ ಕೂಡ ನಮ್ಮ ಜತೆ ಪ್ರತಿಭಟನೆ ಮಾಡಿದ್ದರು. ನಾನು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದೆ.ಅಂದು ನಮ್ಮ ಜತೆ ಹೋರಾಟ ಮಾಡಿದವರು ಇಂದು ಯೋಜನೆ ಜಾರಿ ವಿಚಾರದಲ್ಲಿ ಮೌನವಾಗಿರುವುದೇಕೆ? ಈವರೆಗೂ ಯಾಕೆ ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕುಡಿಯುವ ನೀರಿನ ಯೋಜನೆಗೆ ಯಾವುದೇ ಅನ್ಯರಾಜ್ಯಗಳ ಅನುಮತಿ ಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಇದನ್ನು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ವಿಳಂಬ ಏಕೆ ಎಂದು ಅರ್ಥವಾಗುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ಫೆ. 27 ರಿಂದ ಪಾದಯಾತ್ರೆ ಹಮ್ಮಿಕೊಂಡಿದೆ. ರಾಮನಗರದಿಂದ ಬೆಂಗಳೂರು ನಗರಕ್ಕೆ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ.