ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಮರ: 'ಸರ್ವ ಪಕ್ಷ' ಒಗ್ಗಟ್ಟು ಪ್ರದರ್ಶನಕ್ಕೆ ಸ್ಟಾಲಿನ್ ತಂತ್ರ..!

ಈ ವಿವಾದವನ್ನು ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕೇ ಅಥವಾ ಕಾನೂನು ಹೋರಾಟಕ್ಕೆ ಮುಂದಾಗಬೇಕೇ ಎಂಬ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕಾನೂನು ಹೋರಾಟ ನಡೆಸುವುದೇ ಆದರೆ, ತಮ್ಮ ಮುಂದಿರುವ ಆಯ್ಕೆಗಳೇನು ಎಂದು ಸರ್ವಪಕ್ಷ ನಾಯಕರು ಅವಲೋಕನ ನಡೆಸಲಿದ್ದಾರೆ.

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಮರ: 'ಸರ್ವ ಪಕ್ಷ' ಒಗ್ಗಟ್ಟು ಪ್ರದರ್ಶನಕ್ಕೆ ಸ್ಟಾಲಿನ್ ತಂತ್ರ..!
Linkup
(): ಕರ್ನಾಟಕದ ಯೋಜನೆ ಸಂಬಂಧ ಚರ್ಚೆ ನಡೆಸಲು ತಮಿಳುನಾಡು ಸಿಎಂ ಎಂ. ಕೆ. ಸರ್ವ ಪಕ್ಷ ಸಭೆ ಕರೆದಿದ್ದಾರೆ. ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೂ ಈ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಮನವಿ ಮಾಡಿದ್ದಾರೆ. ಜುಲೈ 12 ಸೋಮವಾರದಂದು ಚೆನ್ನೈನಲ್ಲಿ ಈ ಸಭೆ ಆಯೋಜಿಸಲಾಗಿದೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಆರಂಭಿಸಿದೆ. ಈ ಯೋಜನೆಯನ್ನು ಬಲವಾಗಿ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರ, ಇದೀಗ ತಮಿಳುನಾಡು ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳ ಬೆಂಬಲದೊಂದಿಗೆ ಕರ್ನಾಟಕದ ವಿರುದ್ಧ ಹೋರಾಡಲು ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಸಿದ್ದತೆ ನಡೆಸಿದೆ. ಮೇಕೆದಾಟು ಯೋಜನೆ ಪ್ರಸ್ತಾಪ ವಿವಾದದ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ, ಈ ವಿವಾದವನ್ನು ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕೇ ಅಥವಾ ಕಾನೂನು ಹೋರಾಟಕ್ಕೆ ಮುಂದಾಗಬೇಕೇ ಎಂಬ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಒಂದು ವೇಳೆ ಕಾನೂನು ಹೋರಾಟ ನಡೆಸುವುದೇ ಆದರೆ, ತಮ್ಮ ಮುಂದಿರುವ ಆಯ್ಕೆಗಳೇನು ಎಂದು ಸರ್ವಪಕ್ಷ ನಾಯಕರು ಅವಲೋಕನ ನಡೆಸಲಿದ್ದಾರೆ. ತಮಿಳುನಾಡು ರಾಜ್ಯದ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಈ ವಿಚಾರವಾಗಿ ಒಗ್ಗಟ್ಟಾಗಿ ತೀರ್ಮಾನ ಕೈಗೊಳ್ಳಬೇಕೆಂಬ ಕಾರಣಕ್ಕೆ ಮುಖ್ಯಮಂತ್ರಿ ಸ್ಟಾಲಿನ್ ಕರೆದಿದ್ದು, ಜುಲೈ 9 ಶುಕ್ರವಾರದಂದು ಮುಖ್ಯಮಂತ್ರಿಗಳ ಕಚೇರಿಯಿಂದಲೇ ಅಧಿಕೃತ ಆಹ್ವಾನ ಹೊರಬಿದ್ದಿದೆ. ಈ ಹಿಂದೆ ಇದೇ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಬೇಡಿ ಎಂದು ಆಗ್ರಹಪೂರ್ವಕವಾಗಿ ಮನವಿ ಮಾಡಿದ್ದರು. ಇದಕ್ಕೂ ಮುನ್ನ ತಮಿಳುನಾಡಿನ ನೀರಾವರಿ ಸಚಿವ ಎಸ್. ದೊರೈಮುರುಗನ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನೂ ದಿಲ್ಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.