ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್ ಹತ್ಯೆ ಪ್ರಕರಣ: ನಳಿನ್ ಕುಮಾರ್ ಕಟೀಲ್ ಏನಂದ್ರು?

ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಏನು ಹೇಳಿದರು ಎಂಬ ವಿವರ ಇಲ್ಲಿದೆ.

ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್ ಹತ್ಯೆ ಪ್ರಕರಣ: ನಳಿನ್ ಕುಮಾರ್ ಕಟೀಲ್ ಏನಂದ್ರು?
Linkup
ಬೆಂಗಳೂರು: ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವನ್ನು ಪಡೆದುಕೊಳ್ಳುತ್ತಿದೆ. ಮೃತದೇಹದ ಅಂತಿಮ ದರ್ಶನವನ್ನು ಪಡೆದ ಬಿಜೆಪಿ ರಾಜ್ಯಾಧ್ಯಕ್ಷ , ಈ ಹತ್ಯೆಯ ಹಿಂದೆ ಯಾರೇ ಇದ್ದರೂ ಅವರು ಎಷ್ಟೇ ಬಲಿಷ್ಠರಾದರೂ ಅವರ ಬಂಧನವಾಗಲಿದೆ ಎಂದಿದ್ದಾರೆ. ರಾಜಕೀಯವಾಗಿ ಸಾಮಾಜಿಕವಾಗಿ ಕೆಲಸ ಮಾಡಿದ ಮಹಿಳೆ ರೇಖಾ ಕದಿರೇಶ್ ಬಿಜೆಪಿ ಪಕ್ಷಕ್ಕೆ ಆ ಭಾಗದಲ್ಲಿ ಶಕ್ತಿ ತುಂಬಿದವರು. ಈ ಹಿಂದೆ ಅವರ ಪತಿಯ ಹತ್ಯೆ ನಡೆದಿತ್ತು. ಇದೀಗ ಅವರ ಕೊಲೆಯ ಮೂಲಕ ಹತ್ಯೆಯ ಸರಣಿ ಮುಂದುವರಿದಿದೆ ಎಂದರು. ಘಟನೆಯ ಕುರಿತಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸೂಕ್ತ ತನಿಖೆ ನಡೆಸುವಂತೆ ಈಗಾಗಲೇ ಸೂಚನೆ ಕೊಟ್ಟಿದ್ದಾರೆ. 24 ಗಂಟೆಯ ಒಳಗಾಗಿ ಆರೋಪಿಗಳ ಬಂಧನ ಆಗಬೇಕು ಎಂದು ಸೂಚನೆ ನೀಡಲಾಗಿದೆ. ಈ ಹತ್ಯೆಯ ಹಿಂದೆ ರಾಜಕೀಯ ಕೈವಾಡ ಇದ್ದರೆ ಅದು ಬಹಿರಂಗವಾಗಲಿ. ಹತ್ಯೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗಬೇಕು ಎಂದು ಅವರು ಒತ್ತಾಯಿಸಿದರು. ಬಿಜೆಪಿ ಪಕ್ಷದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ಇಬ್ಬರು ದುಷ್ಕರ್ಮಿಗಳು ಗುರುವಾರ ಬೆಳಗ್ಗೆ ಹತ್ಯೆ ಮಾಡಿದ್ದರು. ಈ ಹತ್ಯೆಗೆ ನಿಖರವಾದ ಕಾರಣ ಏನು ಎಂದು ತಿಳಿದುಬಂದಿಲ್ಲ. ಈಗಾಗಲೇ ಸುಮಾರು ಐವತ್ತಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದ್ದು ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಿಬ್ಬರು ನಾಪತ್ತೆ ಆಗಿದ್ದು ಅವರ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.