ಮಾಜಿ ಸಚಿವ ರವಿಶಂಕರ್‌ ಪ್ರಸಾದ್‌ ತಮಿಳುನಾಡು ನೂತನ ರಾಜ್ಯಪಾಲ?

ಇತ್ತೀಚಿನ ನಡೆದ ಸಚಿವ ಸಂಪುಟ ವಿಸ್ತರಣೆಗೆ ಮೊದಲು ರಾಜೀನಾಮೆ ನೀಡಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಖಾತೆ ಸಚಿವರಾಗಿದ್ದ ರವಿಶಂಕರ್‌ ಪ್ರಸಾದ್‌ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಮಾಜಿ ಸಚಿವ ರವಿಶಂಕರ್‌ ಪ್ರಸಾದ್‌ ತಮಿಳುನಾಡು ನೂತನ ರಾಜ್ಯಪಾಲ?
Linkup
ಹೊಸದಿಲ್ಲಿ: ತಮಿಳುನಾಡಿನ ರಾಜ್ಯಪಾಲರನ್ನಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಅವರನ್ನು ನೇಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಖಾತೆ ಸಚಿವರಾಗಿದ್ದ ಅವರು ಇತ್ತೀಚಿನ ನಡೆದ ಸಚಿವ ಸಂಪುಟ ವಿಸ್ತರಣೆಗೆ ಮೊದಲು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಸಾಕಷ್ಟು ಜನರ ಹುಬ್ಬೇರಿಸಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ಅಥವಾ ರಾಜ್ಯಪಾಲರ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಕ್ರಮವಾಗಿ ತಮಿಳುನಾಡಿನ ರಾಜ್ಯಪಾಲರನ್ನಾಗಿ ರವಿಶಂಕರ್‌ ಪ್ರಸಾದ್‌ ಅವರನ್ನು ನೇಮಿಸಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ. ಹಾಲಿ ತಮಿಳುನಾಡು ಭನ್ವರಿಲಾಲ್‌ ಪುರೋಹಿತ್‌ ಅವರು ಬಿಜೆಪಿ ಕೇಂದ್ರ ನಾಯಕರ ಸೂಚನೆಯಂತೆ ಶನಿವಾರ ದಿಲ್ಲಿಗೆ ತೆರಳಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಕೆಲವೇ ದಿನಗಳ ಹಿಂದೆ ಕೇಂದ್ರ ಸಚಿವರಾಗಿದ್ದ ತಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ಶನಿವಾರ ಅವರು ಹುದ್ದೆ ವಹಿಸಿಕೊಳ್ಳಲು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇದೇ ಹೊತ್ತಲ್ಲಿ ಪಕ್ಕದ ತಮಿಳುನಾಡಿನಲ್ಲಿಯೂ ಮಹತ್ವದ ಬೆಳವಣಿಗೆ ನಡೆಯುತ್ತಿದೆ