ಮೆಟ್ರೋ ರೈಲು ಕಾಮಗಾರಿಗೆ ಅಡ್ಡಿಯಾಗಿರುವ 138 ಮರಗಳನ್ನು ಕತ್ತರಿಸಲು ಹೈಕೋರ್ಟ್‌ ಅನುಮತಿ

ಬೆಂಗಳೂರು ಪರಿಸರ ಟ್ರಸ್ಟ್‌ ಮತ್ತು ಪರಿಸರವಾದಿ ಟಿ ದತ್ತಾತ್ರೇಯ ದೇವರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ನಿಗಮ ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಅನುಸರಿಸಬೇಕು. ಗಿಡ ನೆಡುವುದು ಮತ್ತು ಪರಿಸರದ ಮೇಲಿನ ಪರಿಣಾಮದ ಕುರಿತು ಈ ಹಿಂದಿನ ಆದೇಶದಂತೆ ಸ್ಥಿತಿಗತಿ ವರದಿ ಸಲ್ಲಿಸಬೇಕು’ ಎಂದು ಷರತ್ತನ್ನು ವಿಧಿಸಿ ನ್ಯಾಯಪೀಠ ಈ ಆದೇಶ ಮಾಡಿದೆ.

ಮೆಟ್ರೋ ರೈಲು ಕಾಮಗಾರಿಗೆ ಅಡ್ಡಿಯಾಗಿರುವ 138 ಮರಗಳನ್ನು ಕತ್ತರಿಸಲು ಹೈಕೋರ್ಟ್‌ ಅನುಮತಿ
Linkup
ಬೆಂಗಳೂರು: ನಮ್ಮ ಮೆಟ್ರೊ ರೈಲು ಯೋಜನೆಯ ಕಾಮಗಾರಿಗೆ ಅಡ್ಡಿಯಾಗಿರುವ 138 ಮರಗಳನ್ನು ಕತ್ತರಿಸಲು ಹಾಗೂ 84 ಮರಗಳನ್ನು ಸ್ಥಳಾಂತರಿಸಲು ಹೈಕೋರ್ಟ್‌, ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ ಅನುಮತಿ ನೀಡಿದೆ. ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬೆಂಗಳೂರು ಪರಿಸರ ಟ್ರಸ್ಟ್‌ ಮತ್ತು ಪರಿಸರವಾದಿ ಟಿ ದತ್ತಾತ್ರೇಯ ದೇವರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ನಿಗಮ ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಅನುಸರಿಸಬೇಕು. ಗಿಡ ನೆಡುವುದು ಮತ್ತು ಪರಿಸರದ ಮೇಲಿನ ಪರಿಣಾಮದ ಕುರಿತು ಈ ಹಿಂದಿನ ಆದೇಶದಂತೆ ಸ್ಥಿತಿಗತಿ ವರದಿ ಸಲ್ಲಿಸಬೇಕು’ ಎಂದು ಷರತ್ತನ್ನು ವಿಧಿಸಿ ನ್ಯಾಯಪೀಠ ಈ ಆದೇಶ ಮಾಡಿದೆ. ಮೆಟ್ರೊ ನಿಗಮದ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಉದಯ್‌ ಹೊಳ್ಳ, ‘ಮರ ಕಡಿದ ಬಳಿಕ ಪರಿಸರದ ಮೇಲಿನ ಪರಿಣಾಮ ವರದಿ ಸಿದ್ಧಪಡಿಸಲು ಎರಡು ವರ್ಷ ಸಮಯ ಹಿಡಿಯುತ್ತದೆ. ಹೀಗಾಗಿ, ಹಿಂದಿನ ವರದಿಗಳನ್ನು ಸಲ್ಲಿಸಲು ವಿಳಂಬವಾಗಿದೆ. ಹೊಸದಾಗಿ ಪರಿಸರದ ಮೇಲಿನ ಪರಿಣಾಮದ ಕುರಿತು ವಿಶ್ಲೇಷಣಾ ವರದಿ ಸಿದ್ಧಪಡಿಸಲಾಗುವುದು. ಪ್ರಕರಣವು ನ್ಯಾಯಾಲಯದಲ್ಲಿ ಇರುವುದರಿಂದ ಮೆಟ್ರೊ ಯೋಜನೆ ತಡವಾಗುತ್ತಿದ್ದು, ವೆಚ್ಚವೂ ಹೆಚ್ಚಾಗುತ್ತಿದೆ’ ಎಂದು ಹೇಳಿದರು. ಅರ್ಜಿದಾರರ ಪರ ವಾದಿಸಿದ ವಕೀಲ ಪ್ರದೀಪ್‌ ನಾಯಕ್‌, ‘ಮರಗಳನ್ನು ಕಡಿಯುವುದರಿಂದ ಆಗುವ ದುಷ್ಪರಿಣಾಮ ಮತ್ತು ಹೊಸ ಗಿಡಗಳನ್ನು ನೆಡುವುದರ ಕುರಿತು ತಜ್ಞರ ಸಮಿತಿಯು ವರದಿ ಸಲ್ಲಿಸಲು ನ್ಯಾಯಾಲಯ ಹಲವು ಬಾರಿ ಆದೇಶಿಸಿದರೂ ಇನ್ನೂ ನಿಗಮ ಯಾವುದೇ ವರದಿಗಳನ್ನು ಸಲ್ಲಿಸಿಲ್ಲ’ ಎಂದು ದೂರಿದರು. ನಗರದಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌ ತೆರವುಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌, ಭಿತ್ತಿಪತ್ರಗಳ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಗುರುವಾರ ಒಂದೇ ದಿನ 1200ಕ್ಕೂ ಹೆಚ್ಚು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಯಿತು. ನಗರದ 8 ವಲಯಗಳಲ್ಲೂ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌ಗಳನ್ನು ತೆರವುಗೊಳಿಸುವಂತೆ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಆದೇಶಿಸಿರುವ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ರಸ್ತೆ ಬದಿಯ ವಿದ್ಯುತ್‌ ಕಂಬಗಳು, ಪಾದಚಾರಿ ಮಾರ್ಗ, ರಾಜಕಾಲುವೆಯ ತಡೆಗೋಡೆ ಮೇಲೆ ಅಳವಡಿಸುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯ ಮಾರತ್‌ಹಳ್ಳಿ, ವೈಟ್‌ಫೀಲ್ಡ್‌, ಹೂಡಿ, ಎಚ್‌ಬಿಆರ್‌ ಲೇಔಟ್‌, ಯಲಹಂಕ, ಥಣಿಸಂದ್ರ ಮುಖ್ಯರಸ್ತೆ, ರಾಜಾಜಿನಗರ, ಎಚ್‌ಎಸ್‌ಆರ್‌ ಲೇಔಟ್‌, ಬೇಗೂರು ಮುಖ್ಯರಸ್ತೆ, ಅಂಜನಾಪುರ, ಜ್ಞಾನಭಾರತಿ ಲೇಔಟ್‌, ದಾಸರಹಳ್ಳಿ ಸೇರಿದಂತೆ ಇನ್ನಿತರೆ ಕಡೆ ಫ್ಲೆಕ್ಸ್‌ಗಳ ಕಾರ್ಯಾಚರಣೆ ಕೈಗೊಳ್ಳಲಾಯಿತು.