ಮಂಡ್ಯ ಅಕ್ರಮ ಗಣಿಗಾರಿಕೆ: ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಎಂಪಿ ಸುಮಲತಾ ಒತ್ತಾಯ, ಕೇಂದ್ರ ಸಚಿವರ ಭೇಟೆ!

ಮಂಡ್ಯ ಅಕ್ರಮ ಗಣಿಗಾರಿಕೆ ಸಂಬಂಧ ಒಂದೊಂದು ತಿರುವು ಪಡೆಯುತ್ತಿದೆ. ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ರನ್ನು ಭೇಟಿ ಮಾಡಿ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ.

ಮಂಡ್ಯ ಅಕ್ರಮ ಗಣಿಗಾರಿಕೆ: ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಎಂಪಿ ಸುಮಲತಾ ಒತ್ತಾಯ, ಕೇಂದ್ರ ಸಚಿವರ ಭೇಟೆ!
Linkup
ಹೊಸದಿಲ್ಲಿ: ಕೆಆರ್‌ಎಸ್‌ ಅಣೆಕಟ್ಟೆ ಸುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ತನಿಖೆ ನಡೆಸಬೇಕು ಎಂದು ಮಂಡ್ಯ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಕೇಂದ್ರ ಜಲಶಕ್ತಿ ಸಚಿವ ರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಸುಮಲತಾ, ''ಕೆಆರ್‌-ಎಸ್‌ನಿಂದ 20 ಕಿ.ಮೀ ಸುತ್ತಮುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದರಿಂದ ಅಣೆಕಟ್ಟೆಗೆ ಧಕ್ಕೆಯಾಗಬಹುದೆಂದು ಸುಪ್ರೀಂ ಕೋರ್ಟ್‌ ಸಹ ಆತಂಕ ವ್ಯಕ್ತಪಡಿಸಿದೆ. ಅದನ್ನು ಕಡೆಗಣಿಸಿ ಮಂಡ್ಯ ಜಿಲ್ಲೆಯಲ್ಲಿಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆದಿದೆ. ಜನಪ್ರತಿನಿಧಿಗಳ ಬೆಂಬಲಿಗರೇ ಅಕ್ರಮ ಗಣಿಗಾರಿಕೆಯನ್ನು ನಿರ್ಭೀತಿಯಿಂದ ನಡೆಸುತ್ತಿದ್ದಾರೆ. ಹೀಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕವೇ ತನಿಖೆ ನಡೆಸುವ ಅಗತ್ಯವಿದೆ,'' ಎಂದು ವಿವರಿಸಿದ್ದಾರೆ. ''ಗಣಿಗಾರಿಕೆ ಹೆಸರಿನಲ್ಲಿ ಭಾರಿ ಸ್ಫೋಟಗಳನ್ನು ನಡೆಸುತ್ತಿರುವುದರಿಂದ ಗಾಳಿ ಮತ್ತು ನೀರು ಮಲಿನವಾಗಿದೆ. ಗಣಿ ತ್ಯಾಜ್ಯದಿಂದಾಗಿ ಗಣಿಗಾರಿಕೆ ನಡೆಯುವ ಸುತ್ತಮುತ್ತಲಿನ ಪ್ರದೇಶದ ಜನ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಗರ್ಭಪಾತದ ಪ್ರಮಾಣವೂ ಹೆಚ್ಚುತ್ತಿದೆ,'' ಎಂದು ಸಂಸದೆ ಕಳವಳ ವ್ಯಕ್ತಪಡಿಸಿದ್ದಾರೆ.