ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಸಚಿವ ಚೆಲುವರಾಯಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು. ಮದ್ದೂರು: ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಅಂತಿಮವಾಗಿದೆ. ಇಷ್ಟರಲ್ಲೇ ಪಕ್ಷದ ವರಿಷ್ಠರು ಘೋಷಣೆ ಮಾಡಲಿದ್ದಾರೆ’ ಎಂದು ಹೇಳಿದರು. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸ್ಪರ್ದಿಸುವ ಸಾಧ್ಯತೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆ ಬಗ್ಗೆ ಗೊತ್ತಿಲ್ಲ. ಯಾರೇ ಸ್ಪರ್ಧಿಸಿದರೂ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯ ಲೋಕಸಭೆ ಜೆಡಿಎಸ್ ಪಾಲು? ಬಿಜೆಪಿ ನಿರ್ಧಾರಕ್ಕೆ ಸುಮಲತಾ ಕಂಗಾಲು: ಶೀಘ್ರವೇ ವಿಜಯೇಂದ್ರ ಭೇಟಿ; ಸಂಸದೆಗೆ ಕಾಂಗ್ರೆಸ್ ಗಾಳ! ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂಬುದಕ್ಕೆ ಉತ್ತರಿಸಿದ ಅವರು, ‘ಅವರು ಆ ರೀತಿ ಏಕೆ ಹೇಳಿಕೆ ಕೊಟ್ಟಿದ್ದಾರೆಯೋ ಗೊತ್ತಿಲ್ಲ, ಪಕ್ಷದೊಳಗೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಅವೆಲ್ಲಾ ಮುಂದಿನ ದಿನಗಳಲ್ಲಿ ಬಗೆಹರಿಯುತ್ತವೆ’ ಎಂದರು. ಇದೇ ವೇಳೆ ಸಂಸದೆ ಸುಮಲತಾ ಅಂಬರೀಷ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಮಾತನಾಡಿದ ಅವರು, ಈ ಬಗ್ಗೆ ‘ನನಗೇನು ಗೊತ್ತಿಲ್ಲ’ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಸಚಿವ ಚೆಲುವರಾಯಸ್ವಾಮಿ
Linkup
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು. ಮದ್ದೂರು: ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಅಂತಿಮವಾಗಿದೆ. ಇಷ್ಟರಲ್ಲೇ ಪಕ್ಷದ ವರಿಷ್ಠರು ಘೋಷಣೆ ಮಾಡಲಿದ್ದಾರೆ’ ಎಂದು ಹೇಳಿದರು. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸ್ಪರ್ದಿಸುವ ಸಾಧ್ಯತೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆ ಬಗ್ಗೆ ಗೊತ್ತಿಲ್ಲ. ಯಾರೇ ಸ್ಪರ್ಧಿಸಿದರೂ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯ ಲೋಕಸಭೆ ಜೆಡಿಎಸ್ ಪಾಲು? ಬಿಜೆಪಿ ನಿರ್ಧಾರಕ್ಕೆ ಸುಮಲತಾ ಕಂಗಾಲು: ಶೀಘ್ರವೇ ವಿಜಯೇಂದ್ರ ಭೇಟಿ; ಸಂಸದೆಗೆ ಕಾಂಗ್ರೆಸ್ ಗಾಳ! ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂಬುದಕ್ಕೆ ಉತ್ತರಿಸಿದ ಅವರು, ‘ಅವರು ಆ ರೀತಿ ಏಕೆ ಹೇಳಿಕೆ ಕೊಟ್ಟಿದ್ದಾರೆಯೋ ಗೊತ್ತಿಲ್ಲ, ಪಕ್ಷದೊಳಗೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಅವೆಲ್ಲಾ ಮುಂದಿನ ದಿನಗಳಲ್ಲಿ ಬಗೆಹರಿಯುತ್ತವೆ’ ಎಂದರು. ಇದೇ ವೇಳೆ ಸಂಸದೆ ಸುಮಲತಾ ಅಂಬರೀಷ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಮಾತನಾಡಿದ ಅವರು, ಈ ಬಗ್ಗೆ ‘ನನಗೇನು ಗೊತ್ತಿಲ್ಲ’ ಎಂದರು. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಸಚಿವ ಚೆಲುವರಾಯಸ್ವಾಮಿ