ಮತ್ತೊಂದು ಸಿನಿಮಾಕ್ಕೆ ಚಾಲನೆ ಕೊಟ್ಟ ನಟ ಪ್ರಜ್ವಲ್ ದೇವರಾಜ್‌; ಟೈಟಲ್ ಏನು?

'ಡೈನಾಮಿಕ್ ಪ್ರಿನ್ಸ್' ಪ್ರಜ್ವಲ್ ದೇವರಾಜ್ ಅವರು ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 'ಮಾಫಿಯಾ' ನಂತರ ಇದೀಗ ಮತ್ತೊಂದು ಆಕ್ಷನ್‌ ಥ್ರಿಲ್ಲರ್ ಕಥೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಿನಿಮಾಕ್ಕೆ ಮುಹೂರ್ತ ಕೂಡ ನೆರವೇರಿದೆ.

ಮತ್ತೊಂದು ಸಿನಿಮಾಕ್ಕೆ ಚಾಲನೆ ಕೊಟ್ಟ ನಟ ಪ್ರಜ್ವಲ್ ದೇವರಾಜ್‌; ಟೈಟಲ್ ಏನು?
Linkup
ಸ್ಯಾಂಡಲ್‌ವುಡ್‌ನ ಬೇಡಿಕೆಯ ಹೀರೋಗಳಲ್ಲಿ ನಟ ಕೂಡ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಕಳೆದ ವಾರವಷ್ಟೇ ಅವರ ನಟನೆಯ 'ಅರ್ಜುನ್ ಗೌಡ' ಸಿನಿಮಾ ತೆರೆಕಂಡಿದೆ. ಈ ಮಧ್ಯೆ ಹೊಸದೊಂದು ಸಿನಿಮಾಕ್ಕೆ ಪ್ರಜ್ವಲ್ ದೇವರಾಜ್ ಚಾಲನೆ ನೀಡಿದ್ದಾರೆ. ಚಿತ್ರಕ್ಕೆ '' ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭ ಆರ್‌ಪಿಸಿ ಲೇಔಟ್‌ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ದೃಶ್ಯಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದರು. ತೆಲುಗಿನಲ್ಲಿ ಬೇಡಿಕೆಯ ಸ್ಕ್ರಿಪ್ಟ್‌ ರೈಟರ್ ಆಗಿ, ಎರಡು ಸಿನಿಮಾಗಳಿಗೆ ನಿರ್ದೇಶನವನ್ನೂ ಮಾಡಿರುವ ಹರಿ ಪ್ರಸಾದ್ ಜಕ್ಕ ಅವರು ಇದೇ ಮೊದಲ ಬಾರಿಗೆ ಕನ್ನಡಕ್ಕೆ ಎಂಟ್ರಿ ನೀಡಿದ್ದಾರೆ. 'ಗಣ' ಚಿತ್ರಕ್ಕೆ ಅವರ ನಿರ್ದೇಶನವಿದ್ದು, ಇದೊಂದು ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾವಾಗಿದೆ. ಫೆಬ್ರವರಿ ಮೊದಲ ವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಈ ಹಿಂದೆ 'ಶ್ರೀ ಭರತ ಬಾಹುಬಲಿ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಸಾರಾ ಹರೀಶ್, ಈ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್‌ಗೆ ಜೋಡಿಯಾಗಿದ್ದಾರೆ. ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ಪಾರ್ಥು ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌. ಉಳಿದಂತೆ, ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ.ಆರ್. ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಶುರು ಮಾಡಿದ್ದ ಪ್ರಜ್ವಲ್ಈಚೆಗಷ್ಟೇ 'ಮಾಫಿಯಾ' ಸಿನಿಮಾಕ್ಕೆ ಚಾಲನೆ ಕೊಟ್ಟಿದ್ದರು ಪ್ರಜ್ವಲ್. 'ಮಮ್ಮಿ' ಖ್ಯಾತಿಯ ಲೋಹಿತ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾವನ್ನು ಬೆಂಗಳೂರು ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ 40-50% ಶೂಟಿಂಗ್ ಕೂಡ ಮುಕ್ತಾಯಗೊಂಡಿದೆ. ಇದರ ಜೊತೆಗೆ 'ವೀರಂ' ಸಿನಿಮಾದ ಶೂಟಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ. ಪ್ರಜ್ವಲ್‌ಗೆ ನಾಯಕಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. 'ಖದರ್' ಕುಮಾರ್ ಅದರ ನಿರ್ದೇಶಕರು. ರಾಮ್ ನಾರಾಯಣ್ ನಿರ್ದೇಶನದಲ್ಲಿ 'ಅಬ್ಬರ' ಸಿನಿಮಾದಲ್ಲೂ ಪ್ರಜ್ವಲ್ ನಟಿಸಿದ್ದಾರೆ. ಇವೆರಡೂ ಸಿನಿಮಾಗಳ ಶೂಟಿಂಗ್ ಆಗಲೇ ಮುಕ್ತಾಯವಾಗಿ, ರಿಲೀಸ್‌ಗೆ ಸಿದ್ಧತೆ ನಡೆಯುತ್ತಿದೆ.