''ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ'' ಎಂದ ನಿಖಿಲ್ ಕುಮಾರಸ್ವಾಮಿ

''ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ'' ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

''ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ'' ಎಂದ ನಿಖಿಲ್ ಕುಮಾರಸ್ವಾಮಿ
Linkup
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಟ ಹಾಗೂ ರಾಜಕಾರಣಿ ಸಿಹಿ ಸುದ್ದಿ ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮತ್ತು ಪತ್ನಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ತಂದೆಯಾಗುತ್ತಿದ್ದಾರಂತೆ ಎಂಬ ಅಂತೆ-ಕಂತೆ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಇದೀಗ ವಿಷಯದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ. ತಾವು ತಂದೆಯಾಗುತ್ತಿರುವ ವಿಷಯವನ್ನು ನಿಖಿಲ್ ಕುಮಾರಸ್ವಾಮಿ ಖಚಿತ ಪಡಿಸಿದ್ದಾರೆ. ''ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ'' ಎಂದು ಮಾಧ್ಯಮಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಕಳೆದ ವರ್ಷದ ಲಾಕ್‌ಡೌನ್‌ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. 2020 ರ ಏಪ್ರಿಲ್ 17 ರಂದು ಬಿಡದಿ ಸಮೀಪದಲ್ಲಿರುವ ಕೇತಗಾನಹಳ್ಳಿಯಲ್ಲಿನ ಫಾರ್ಮ್‌ಹೌಸ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ವಿವಾಹ ಬಂಧನಕ್ಕೊಳಗಾದರು. ಎರಡು ತಿಂಗಳ ಹಿಂದೆಯಷ್ಟೇ ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವವನ್ನು ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಆಚರಿಸಿಕೊಂಡಿದ್ದರು. ಇದೀಗ ರೇವತಿ ಐದು ತಿಂಗಳ ಗರ್ಭಿಣಿಯಾಗಿದ್ದಾರೆ. ಸಿಹಿ ಸುದ್ದಿ ನೀಡಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.