ಮೈಸೂರು ಅತ್ಯಾಚಾರ ಪ್ರಕರಣ: ಸದನದ ಬಾವಿಗಳಿದ ಕಾಂಗ್ರೆಸ್ ಶಾಸಕಿಯರು

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಕಾಂಗ್ರೆಸ್‌ ಶಾಸಕಿಯರು ಈ ವಿಷಯದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಧರಣಿ ನಡೆಸಿದರು.

ಮೈಸೂರು ಅತ್ಯಾಚಾರ ಪ್ರಕರಣ: ಸದನದ ಬಾವಿಗಳಿದ ಕಾಂಗ್ರೆಸ್ ಶಾಸಕಿಯರು
Linkup
ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣದ ಚರ್ಚೆಯ ಸಂದರ್ಭದಲ್ಲಿ ಮಾತಿಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್ ಶಾಸಕಿಯರು ಸದನದ ಬಾವಿಗಿಳಿದು ಧರಣಿಗೆ ಮುಂದಾದ ಘಟನೆ ನಡೆಯಿತು. ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಡಿಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ‌ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಸಿದ್ದರಾಮಯ್ಯ ಮಾತನಾಡುತ್ತಾ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.‌ ಆದರೆ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರದ ವೈಫಲ್ಯತೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಿಯರಾದ, ಅಂಜಲಿ‌ ನಿಂಬಾಳ್ಕರ್ ಹಾಗೂ ಸೌಮ್ಯ ರೆಡ್ಡಿ ಬಾವಿಗಿಳಿದು ಧರಣಿ ನಡೆಸಲು ಮುಂದಾದರು. ಬಳಿಕ ಅವರನ್ನು ಸ್ಪೀಕರ್ ಸಮಾಧಾನ ಪಡಿಸಿದರು. ಸ್ಪೀಕರ್ ಮಾತಿನ ನಂತರ ಧರಣಿ ವಾಪಸ್‌ ಪಡೆದರು.