ಯೋಗ ದಿನದಂದು ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

ಜೂನ್‌ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ

ಯೋಗ ದಿನದಂದು ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ
Linkup
ಬೆಂಗಳೂರು: ಜೂನ್‌ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ಮಂಗಳವಾರ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ''ಕೋವಿಡ್‌ ಕಾರಣದಿಂದ ಈ ವರ್ಷದ ಸರಕಾರಿ ದಿನಾಚರಣೆ ಕೇವಲ 100 ಜನರ ಉಪಸ್ಥಿತಿಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯುತ್ತದೆ'' ಎಂದು ಅವರು ತಿಳಿಸಿದರು. ಕ್ರೀಡಾ ಮತ್ತು ಯುವಜನ ಸಬಲೀಕರಣ, ನಿಮ್ಹಾನ್ಸ್‌, ಪರಿವರ್ತನಾ ಯೋಗಾ ಪ್ರತಿಷ್ಠಾನ ಹಾಗೂ ಆರ್ಟ್‌ ಆಫ್‌ ಲಿವಿಂಗ್‌ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 'ಕೋವಿಡ್‌-19 ಯುವಜನರು, ಯೋಗ, ಧ್ಯಾನ' ಎಂಬ ಶೀರ್ಷಿಕೆ ನೀಡಲಾಗಿದೆ.