ಯುಪಿ ಕಳೆದುಕೊಳ್ಳಲಿದೆ ಬಿಜೆಪಿ: ಏಕಾಂಗಿ ಹೋರಾಟಕ್ಕೆ ಸಜ್ಜಾದ ಅಖಿಲೇಶ್ ಯಾದವ್!

ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಭವಿಷ್ಯ ನುಡಿದಿದ್ದಾರೆ.

ಯುಪಿ ಕಳೆದುಕೊಳ್ಳಲಿದೆ ಬಿಜೆಪಿ: ಏಕಾಂಗಿ ಹೋರಾಟಕ್ಕೆ ಸಜ್ಜಾದ ಅಖಿಲೇಶ್ ಯಾದವ್!
Linkup
ಹೊಸದಿಲ್ಲಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಭವಿಷ್ಯ ನುಡಿದಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಉತ್ತರ ಪ್ರದೇಶ ರಾಜಕಾರಣದ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದು, ಸಮಾಆಜವಾದಿ ಪಕ್ಷ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಘೋಷಿಸಿದ್ದಾರೆ. ಉತ್ತರ ಪ್ರದೇಶದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ. ಅದರಲ್ಲೂ ಕೋವಿಡ್ ಹಾವಳಿ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ನಡೆದುಕೊಂಡ ಪರಿ ಜನರಲ್ಲಿ ಆಕ್ರೋಶ ಮಡುಗಟ್ಟುವಂತೆ ಮಾಡಿದೆ ಎಂದು ಅಖಿಲೇಶದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಸಂಭವಿಸಿರುವ ಕೋವಿಡ್ ಸಾವುಗಳನ್ನು ಮುಚ್ಚಿಡುತ್ತಿದೆ. ಕೋವಿಡ್ ಹಾವಳಿಯನ್ನು ತಡೆಯುವಲ್ಲಿ ಸಂಪೂರ್ಣವಾಅಗಿ ವಿಫಲವಾಗಿರುವ ಸರ್ಕಾರ, ಬೇಡದ ವಿಷಯಗಳನ್ನು ಮುಂದೆ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅಖಿಲೇಶ್ ಹರಿಹಾಯ್ದಿದ್ದಾರೆ. ಏಕಾಂಗಿ ಹೋರಾಟ: ಇನ್ನು ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಹೋರಾಡಲಿದೆ ಎಂದು ಅಖಿಲೇಶ್ ಯಾದವ್ ಘೋಷಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳೊಂದಿಗಿನ(ಕಾಂಗ್ರೆಸ್ ಮತ್ತು ಬಿಎಸ್‌ಪಿ) ಮೈತ್ರಿ ಕಹಿ ಅನುಭವ ನೀಡಿದ್ದು, ಅಗತ್ಯ ಬಿದ್ದರೆ ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವುದಾಗಿ ಅಖಿಲೇಶ್ ಸ್ಪಷ್ಟಪಡಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ 300 ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸುವ ಗುರಿ ಹೊಂದಲಾಗಿದ್ದು, ಅದರಂತೆ ಕಾರ್ಯಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಅಖಿಲೇಶ್ ಹೇಳಿದ್ದಾರೆ. ಬಿಜೆಪಿಯಿಂದ ಬೇಸತ್ತಿರುವ ರಾಜ್ಯದ ಜನತೆ ಈ ಬಾರಿ ಸಮಾಜವಾದಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದು, ನಾವು ಪೂರ್ಣ ಬಹುಮತದ ಸರ್ಕಾರ ರಚಿಸುವುದು ಶತಸಿದ್ದ ಎಂದು ಅಖಿಲೇಶ್ ಭವಿಷ್ಯ ನುಡಿದಿದ್ದಾರೆ. ಕೊನೆಯಲ್ಲಿ ಲಸಿಕೆ: ಇನ್ನು ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಕೊರೊನಾ ಲಸಿಕೆ ನೀಡಿದ ಬಳಿಕವಷ್ಟೇ ತಾವು ಲಸಿಕೆ ಪಡೆಯುವುದಾಗಿ ಅಖಿಲೇಶ್ ಘೋಷಿಸಿದ್ದು, ಬಡವರಿಗೆ ಉಚಿತವಾಗಿ ಲಸಿಕೆ ದೊರೆತ ಬಳಿಕವಷ್ಟೇ ತಾವು ಲಸಿಕೆ ಪಡೆಯುವುದಾಗಿ ಸ್ಪಷ್ಟಪಡಿಸಿದರು. ಆರಂಭದ ದಿನಗಳಲ್ಲಿ ಕೊರೊನಾ ಲಸಿಕೆ ಕ್ಲಿನಿಕಲ್ ಟೆಸ್ಟ್ ಪೂರ್ಣಗೊಳಿಸದ ಕಾರಣ ತಾವು ಲಸಿಕೆ ಪಡೆಯಲು ನಿರಾಕರಿಸಿದ್ದಾಗಿ ಅಖಿಲೇಶ್ ಹೇಳಿದ್ದಾರೆ. ಒಟ್ಟಿನಲ್ಲಿ ವಿಧಾನಸಭೆ ಚುನಾವಣೆ ಮೂಡ್‌ನಲ್ಲಿರುವ ಅಖಿಲೇಶ್ ಯಾದವ್, ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಮತ್ತೆ ರಾಜ್ಯಭಾರ ಮಾಡುವ ಹುಮ್ಮಸ್ಸಿನಲ್ಲಿರುವುದು ಸ್ಪಷ್ಟ.