'ರಾಕಿಂಗ್ ಸ್ಟಾರ್' ಯಶ್ ನಟನೆಯ 'ಕೆಜಿಎಫ್ 2' ರಿಲೀಸ್ ಬಗ್ಗೆ ಮಾಹಿತಿ ನೀಡಿದ ಪ್ರಶಾಂತ್ ನೀಲ್!

ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಅಭಿನಯದ 'ಕೆಜಿಎಫ್ 2' ಸಿನಿಮಾ ರಿಲೀಸ್ ಯಾವಾಗ ಆಗಲಿದೆ ಎಂದು ಪ್ರಶಾಂತ್ ನೀಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

'ರಾಕಿಂಗ್ ಸ್ಟಾರ್' ಯಶ್ ನಟನೆಯ 'ಕೆಜಿಎಫ್ 2' ರಿಲೀಸ್ ಬಗ್ಗೆ ಮಾಹಿತಿ ನೀಡಿದ ಪ್ರಶಾಂತ್ ನೀಲ್!
Linkup
ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿ, ಬೇರೆ ಚಿತ್ರರಂಗಗಳು ಕೂಡ ಒಮ್ಮೆ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ ಸೂಪರ್ ಹಿಟ್ ಪ್ಯಾನ್ ಇಂಡಿಯಾ ಸಿನಿಮಾ 'ಕೆಜಿಎಫ್' ಚಿತ್ರ ಸಿಕ್ವೇಲ್ ರಿಲೀಸ್ ಯಾವಾಗ ಎಂದು ಪ್ರೇಕ್ಷಕರು ಕಾಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಶಾಂತ್ ನೀಲ್ ಹೇಳಿದ್ದೇನು? "ಸಿನಿಮಾ ಹಾಲ್‌ನಲ್ಲಿ ಗ್ಯಾಂಗ್‌ಸ್ಟರ್‌ಗಳು ತುಂಬಿದಾಗ ಮಾತ್ರ ಮಾನ್‌ಸ್ಟರ್ ಬರ್ತಾನೆ. ಆತ ಬರುವ ದಿನಾಂಕವನ್ನು ಶೀಘ್ರದಲ್ಲಿಯೇ ಘೋಷಣೆ ಮಾಡುತ್ತೇವೆ" ಎಂದು ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅಭಿಮಾನಿಗಳು '' ರಿಲೀಸ್ ಬಗ್ಗೆ ಆಗಾಗ ಕೇಳುತ್ತಿರುವುದಕ್ಕೆ ಪ್ರಶಾಂತ್ ನೀಲ್ ಈಗ ಉತ್ತರ ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ ಕಡಿಮೆಯಾಗುತ್ತಿದೆ. ನಿಧಾನವಾಗಿ ಅನ್‌ಲಾಕ್‌ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಥಿಯೇಟರ್ ಆರಂಭಿಸಲು ಅವಕಾಶ ಕೊಟ್ಟು 100% ಆಸನ ವ್ಯವಸ್ಥೆಗೆ ಅವಕಾಶ ನೀಡಿದಾಗ 'ಕೆಜಿಎಫ್ 2' ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು ಪ್ರಶಾಂತ್ ನೀಲ್ ಹೇಳಿದ್ದಾರೆ. ಬಾಲಿವುಡ್ ದಿಗ್ಗಜರ ನಟನೆ 'ಕೆಜಿಎಫ್ 2' ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಹಾಗೂ ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯ್ ದತ್ ಮುಂತಾದವರು ನಟಿಸಿದ್ದಾರೆ. 'ಕೆಜಿಎಫ್' ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗಿ ಭಾರೀ ಪ್ರಶಂಸೆ ಪಡೆದಿತ್ತು. ಹೀಗಾಗಿ 'ಕೆಜಿಎಫ್ 2' ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದಿದ್ದಾರೆ. ಈ ಸಿನಿಮಾದ ಟೀಸರ್‌ನ್ನು ಕೂಡ ಪ್ರೇಕ್ಷಕರು ಮೆಚ್ಚಿದ್ದಾರೆ. ಎಲ್ಲವೂ ಸರಿಯಾಗಿ ಇದ್ದಿದ್ದರೆ ಕಳೆದ ವರ್ಷವೇ 'ಕೆಜಿಎಫ್ 2' ಸಿನಿಮಾ ರಿಲೀಸ್ ಆಗಬೇಕಾಗಿತ್ತು. ಕೊರೊನಾದಿಂದ ಅಂದುಕೊಂಡಿದ್ದೆಲ್ಲ ಉಲ್ಟಾ ಆಯ್ತು. 'ಕೆಜಿಎಫ್' ಚಾಪ್ಟರ್ 1ಕ್ಕಿಂತ 'ಕೆಜಿಎಫ್ 2' ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ ಎಂದು ಚಿತ್ರತಂಡ ಹೇಳುತ್ತಿದೆ. ಅವರು ಹೇಳಿದ್ದು ಸತ್ಯವೋ, ಸುಳ್ಳೋ ಎಂದು ತಿಳಿಯಲು ಸಿನಿಮಾ ರಿಲೀಸ್ ಆಗುವವರೆಗೆ ಕಾದು ನೋಡಬೇಕು.