ರಾಜ್ಯ ಬಿಜೆಪಿ ಪ್ರಮುಖರ ವಿಶೇಷ ಸಭೆ; ಮುಂದಿನ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವಿಗೆ ಶ್ರಮಿಸೋಣ: ವಿಜಯೇಂದ್ರ

ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.  ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.  ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಾಗಾಗಿ ಎಲ್ಲರ ಸಹಕಾರ, ಮಾರ್ಗದರ್ಶನ ಬೇಕಿದೆ. ಸಭೆಯಲ್ಲಿ ಭಾಗವಹಿಸಿದ ಎಲ್ಲ ಹಿರಿಯರು ಪಕ್ಷದ ಭವಿಷ್ಯದ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಶಕ್ತಿ ತುಂಬಲು ಮಾರ್ಗದರ್ಶನ, ಸಲಹೆ, ಸೂಚನೆಗಳನ್ನು ಮುಕ್ತವಾಗಿ ಕೊಡಬೇಕು ಎಂದು ವಿನಂತಿಸಿದರು. ಪಕ್ಷವು ಕರ್ನಾಟಕದಲ್ಲಿ ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಬಿ.ಎಸ್. ಯಡಿಯೂರಪ್ಪನವರು, ಸದಾನಂದಗೌಡರು, ಈಶ್ವರಪ್ಪನವರು, ಸಿ.ಟಿ.ರವಿಯವರು, ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಹಿರಿಯರು ಕಾರಣಕರ್ತರಾಗಿದ್ದಾರೆ. ಅಂಥ ಎಲ್ಲ ಹಿರಿಯರು ಇಲ್ಲಿದ್ದಾರೆ. ಎಲ್ಲರ ಪರಿಶ್ರಮ ಪಕ್ಷದ ಬೆಳವಣಿಗೆಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ; ಹಬ್ಬ, ಹರಿದಿನಗಳನ್ನು ಬದಿಗಿಡಿ, ಒಗ್ಗಟ್ಟಿನಿಂದ ಕೆಲಸ ಮಾಡಿ: ವಿಜಯೇಂದ್ರ ಬಿಜೆಪಿಯ ಬೃಹದಾದ ಕಟ್ಟಡ ಮಾತ್ರ ನಮಗೆ ಕಾಣುತ್ತದೆ. ಆದರೆ, ಕಟ್ಟಡದ ಅಡಿಪಾಯ ನಮಗೆ ಗೋಚರಿಸುವುದಿಲ್ಲ. ಬಿಜೆಪಿಗೆ ಸುಭದ್ರ ಬುನಾದಿ ಹಾಕಿದ ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅವರೆಲ್ಲರೂ ಪಕ್ಷವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಿದರು. ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು @BJP4Karnataka ಪಕ್ಷದ ಹಿರಿಯ ನಾಯಕರುಗಳೊಂದಿಗೆ ವಿಶೇಷ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣೆ, ನೂತನ ಪದಾಧಿಕಾರಿಗಳ ಆಯ್ಕೆ ಸೇರಿದಂತೆ ಪಕ್ಷದ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ‌ಸದಸ್ಯರಾದ ಶ್ರೀ… pic.twitter.com/PZnWdlq0wu — Vijayendra Yediyurappa (@BYVijayendra) December 28, 2023 ಪಕ್ಷದ ರಾಷ್ಟ್ರದ ಹಿರಿಯರ ಆಶೀರ್ವಾದದಿಂದ ಈ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಎಲ್ಲ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಸಹಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿ ಇಟ್ಟುಕೊಳ್ಳೋಣ. ಲೋಕಸಭೆ ಚುನಾವಣೆ ಮಾತ್ರವಲ್ಲದೆ, ನಂತರ ಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನ ಪರಿಷತ್ ಸೇರಿ ಎಲ್ಲ ಚುನಾವಣೆಗಳಲ್ಲಿ ಕೂಡ ಬಿಜೆಪಿ  ಅಭೂತಪೂರ್ವ ಗೆಲುವು ಸಾಧಿಸಲೇಬೇಕಿದೆ ಎಂದು ತಿಳಿಸಿದರು. ಈ ಗುರಿ ತಲುಪಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದು ನುಡಿದರು. ಇದನ್ನೂ ಓದಿ: ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಿ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ: ವಿಜಯೇಂದ್ರ ಈ ಸಭೆಯಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಮಾಜಿಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ರಾಜ್ಯ ಬಿಜೆಪಿ ಪ್ರಮುಖರ ವಿಶೇಷ ಸಭೆ; ಮುಂದಿನ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವಿಗೆ ಶ್ರಮಿಸೋಣ: ವಿಜಯೇಂದ್ರ
Linkup
ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.  ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.  ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಾಗಾಗಿ ಎಲ್ಲರ ಸಹಕಾರ, ಮಾರ್ಗದರ್ಶನ ಬೇಕಿದೆ. ಸಭೆಯಲ್ಲಿ ಭಾಗವಹಿಸಿದ ಎಲ್ಲ ಹಿರಿಯರು ಪಕ್ಷದ ಭವಿಷ್ಯದ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಶಕ್ತಿ ತುಂಬಲು ಮಾರ್ಗದರ್ಶನ, ಸಲಹೆ, ಸೂಚನೆಗಳನ್ನು ಮುಕ್ತವಾಗಿ ಕೊಡಬೇಕು ಎಂದು ವಿನಂತಿಸಿದರು. ಪಕ್ಷವು ಕರ್ನಾಟಕದಲ್ಲಿ ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಬಿ.ಎಸ್. ಯಡಿಯೂರಪ್ಪನವರು, ಸದಾನಂದಗೌಡರು, ಈಶ್ವರಪ್ಪನವರು, ಸಿ.ಟಿ.ರವಿಯವರು, ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಹಿರಿಯರು ಕಾರಣಕರ್ತರಾಗಿದ್ದಾರೆ. ಅಂಥ ಎಲ್ಲ ಹಿರಿಯರು ಇಲ್ಲಿದ್ದಾರೆ. ಎಲ್ಲರ ಪರಿಶ್ರಮ ಪಕ್ಷದ ಬೆಳವಣಿಗೆಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ; ಹಬ್ಬ, ಹರಿದಿನಗಳನ್ನು ಬದಿಗಿಡಿ, ಒಗ್ಗಟ್ಟಿನಿಂದ ಕೆಲಸ ಮಾಡಿ: ವಿಜಯೇಂದ್ರ ಬಿಜೆಪಿಯ ಬೃಹದಾದ ಕಟ್ಟಡ ಮಾತ್ರ ನಮಗೆ ಕಾಣುತ್ತದೆ. ಆದರೆ, ಕಟ್ಟಡದ ಅಡಿಪಾಯ ನಮಗೆ ಗೋಚರಿಸುವುದಿಲ್ಲ. ಬಿಜೆಪಿಗೆ ಸುಭದ್ರ ಬುನಾದಿ ಹಾಕಿದ ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅವರೆಲ್ಲರೂ ಪಕ್ಷವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಿದರು. ಪಕ್ಷದ ರಾಷ್ಟ್ರದ ಹಿರಿಯರ ಆಶೀರ್ವಾದದಿಂದ ಈ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಎಲ್ಲ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಸಹಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿ ಇಟ್ಟುಕೊಳ್ಳೋಣ. ಲೋಕಸಭೆ ಚುನಾವಣೆ ಮಾತ್ರವಲ್ಲದೆ, ನಂತರ ಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನ ಪರಿಷತ್ ಸೇರಿ ಎಲ್ಲ ಚುನಾವಣೆಗಳಲ್ಲಿ ಕೂಡ ಬಿಜೆಪಿ  ಅಭೂತಪೂರ್ವ ಗೆಲುವು ಸಾಧಿಸಲೇಬೇಕಿದೆ ಎಂದು ತಿಳಿಸಿದರು. ಈ ಗುರಿ ತಲುಪಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದು ನುಡಿದರು. ಇದನ್ನೂ ಓದಿ: ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಿ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ: ವಿಜಯೇಂದ್ರ ಈ ಸಭೆಯಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಮಾಜಿಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು. ರಾಜ್ಯ ಬಿಜೆಪಿ ಪ್ರಮುಖರ ವಿಶೇಷ ಸಭೆ; ಮುಂದಿನ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವಿಗೆ ಶ್ರಮಿಸೋಣ: ವಿಜಯೇಂದ್ರ