ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.  ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತಮ್ಮ ಸರ್ಕಾರ ಸುಭದ್ರವಾಗಿದೆ. ಭದ್ರವಾಗಿ ಮುಂದುವರೆಯಲಿದೆ ಎಂದರು. ಮುಂದಿನ ದಿನಗಳಲ್ಲಿ ಜನರ ಬಳಿಗೆ ಹೋಗುತ್ತೇನೆ ಮತ್ತು ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ,  ಕಾಂಗ್ರೆಸ್ ವರು ಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ವದಂತಿ ಹರಡುತ್ತಿಲ್ಲ ಎಂದರು. 

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ
Linkup
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.  ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತಮ್ಮ ಸರ್ಕಾರ ಸುಭದ್ರವಾಗಿದೆ. ಭದ್ರವಾಗಿ ಮುಂದುವರೆಯಲಿದೆ ಎಂದರು. ಮುಂದಿನ ದಿನಗಳಲ್ಲಿ ಜನರ ಬಳಿಗೆ ಹೋಗುತ್ತೇನೆ ಮತ್ತು ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ,  ಕಾಂಗ್ರೆಸ್ ವರು ಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ವದಂತಿ ಹರಡುತ್ತಿಲ್ಲ ಎಂದರು.  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ