ರಸ್ತೆ ಗುಂಡಿಗಳಿಗೆ ಬಲಿಯಾಗುತ್ತಿದ್ದಾರೆ ಬೈಕ್ ಸವಾರರು! ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ದಿನೇದಿನೇ ವಾಹನ ಸವಾರರ ಜೀವ ಬಲಿ ಪಡೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಇನ್ನೂ ಎಚ್ಚೆತ್ತಿಲ್ಲ. ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದರೂ ಗುಂಡಿಗಳನ್ನು ಮುಚ್ಚುವ ಕೆಲಸ ನಡೆಯುತ್ತಿಲ್ಲ.

ರಸ್ತೆ ಗುಂಡಿಗಳಿಗೆ ಬಲಿಯಾಗುತ್ತಿದ್ದಾರೆ ಬೈಕ್ ಸವಾರರು! ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ
Linkup
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳು ಮರಣಕೂಪವಾಗಿ ಮಾರ್ಪಟ್ಟಿವೆ. ರಸ್ತೆ ಗುಂಡಿಯಿಂದಾಗಿ ದ್ವಿಚಕ್ರ ವಾಹನ ಸವಾರರ ಬಲಿಯಾಗುತ್ತಿದ್ದು ಸರ್ಕಾರ ಮಾತ್ರ ಎಚ್ಚೆತ್ತುಕೊಂಡಿಲ್ಲ. ಈ ನಡುವೆ ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹದಗೆಟ್ಟ ರಸ್ತೆಯಲ್ಲಿ ಸಂಚಾರ ನಡೆಸುವುದೇ ವಾಹನ ಸವಾರರ ಪಾಲಿಗೆ ಸವಾಲಿನ ಸಂಗತಿಯಾಗಿದೆ. ದುರಸ್ತಿ ಪಡಿಸಲು ಹೈಕೋರ್ಟ್ ನೀಡಿದ ಡೆಡ್ ಲೈನ್ ಹಿನ್ನೆಲೆಯಲ್ಲಿ ಸಚಿವ ಆರ್.‌ ಅಶೋಕ್ ಪತ್ರಿಕಾಗೋಷ್ಠಿ ನಡೆಸಿ ಪ್ರಮುಖ ರಸ್ತೆಗಳ ಗುಂಡಿ ಮುಚ್ಚಲು ಹತ್ತು ದಿನಗಳ ಗಡುವು ನೀಡಿದ್ದರು. ಆದರೆ ಅದು ಕೇವಲ ಮಾತಿಗಷ್ಟೇ ಸೀಮಿತವಾಗಿದೆ. ಡೆಡ್ ಲೈನ್ ಅವಧಿ ಮುಗಿದರೂ ಕಾಮಗಾರಿ ಆರಂಭಗೊಂಡಿಲ್ಲ. ಮಳೆಯ ಕಾರಣ ನೀಡಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಸುಮ್ಮನಾಗಿದ್ದಾರೆ. ಬಲಿಯಾಗುತ್ತಿರುವ ಅಮಾಯಕರು ಶಿರಸಿ ಮೂಲದ ಮನೋಜ್ (28) ಖಾಸಗಿ ಕಂಪನಿಯ ಉದ್ಯೋಗಿ. ಸೆಪ್ಟೆಂಬರ್ 16 ರಂದು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿದ್ದು, ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಕ್ಟೋಬರ್ 8 ರಂದು ರಸ್ತೆಗುಂಡಿ ತಪ್ಪಿಸಲು ಪಕ್ಕಕ್ಕೆ ಸರಿದ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಮಹಿಳೆಯ ಮೇಲೆ ಟಿಪ್ಪರ್ ಲಾರಿ ಹರಿದು, ಮಹಿಳೆ ಸಾವನ್ನಪ್ಪಿದ್ದಾರೆ. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಈ ದುರಂತ ನಡೆದಿದೆ. ವಿಪರ್ಯಾಸವೆಂದರೆ ಇದೇ ರಸ್ತೆಯಲ್ಲಿ ಟಿಪ್ಪರ್ ಹರಿದು ಪೊಲೀಸ್ ಪೇದೆಯೊಬ್ಬರು ಕೂಡಾ ಮೃತಪಟ್ಟಿದ್ದರು. ಗುಂಡಿ ಮುಚ್ಚಲು ಕ್ರಮ- ಬೊಮ್ಮಾಯಿ ಭರವಸೆಗುಂಡಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು, ಸಮಸ್ಯೆ ಬಗೆಹರಿಸಲು ಸಭೆ ಕರೆದು, ಪರಿಶೀಲಿಸಲಾಗುವುದು. ಸತತ ಮಳೆಯಿಂದಾಗಿ ದುರಸ್ತಿ ಸಾಧ್ಯವಾಗುತ್ತಿಲ್ಲ. ಮಳೆ ಬಿಡುವು ನೀಡಿದ ಕೂಡಲೇ ಗುಂಡಿಗಳನ್ನು ಮುಚ್ಚಲು ಸಮರೋಪಾದಿಯಲ್ಲಿ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.