ಲಾಕ್‌ಡೌನ್ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ, ಕಮಲ್ ಪಂತ್ ಎಚ್ಚರಿಕೆ

ಸೋಮವಾರದಿಂದ ಜಾರಿಗೊಳ್ಳುವ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಲಾಕ್‌ಡೌನ್ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ, ಕಮಲ್ ಪಂತ್ ಎಚ್ಚರಿಕೆ
Linkup
ಬೆಂಗಳೂರು: ಸೋಮವಾರದಿಂದ ಜಾರಿಯಾಗುವ ಕೋವಿಡ್ ಲಾಕ್‌ಡೌನ್ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಬೆಂಗಳೂರಿನ ನಾಗರಿಕರಲ್ಲಿ ಮನವಿ, ನಾಳೆಯಿಂದ ಜಾರಿಯಾಗುವ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಕೋವಿಡ್ ವಿರುದ್ಧ ಹೋರಾಡಲು ಪ್ರತಿಯೊಬ್ಬರು ನಮ್ಮೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ಲಾಕ್ಡೌನ್ ಉಲ್ಲಂಘಿಸಿದ್ದು ಕಂಡು ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅನಗತ್ಯವಾಗಿ ಓಡಾಡದೆ, ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ ಎಂದು ಜನರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಸೋಮವಾರದಿಂದ ರಾಜ್ಯಾದ್ಯಂತ ಕೆಲವೊಂದು ಬದಲಾವಣೆಗಳೊಂದಿಗೆ ಲಾಕ್‌ಡೌನ್ ಜಾರಿಗೊಳ್ಳುತ್ತಿದೆ. ಬೆಳಗ್ಗೆ 6 ರಿಂದ 10 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಇದಾದ ಬಳಿಕ ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಹೋಟೆಲ್‌, ತಳ್ಳೋ ಗಾಡಿ, ನಂದಿನಿ ಪಾರ್ಲರ್‌ಗಳಿಗೆ ತೆರೆದಿಡಲು ಅವಕಾಶ ನೀಡಲಾಗಿದೆ. ಅಗತ್ಯ ತಯಾರಕಾ ಕೈಗಾರಿಕೆಗಳ ಹೊರತಾಗಿ ಇತರ ಕೈಗಾರಿಕೆಗಳಿಗೂ ಅವಕಾಶವಿಲ್ಲ. ಇನ್ನು ಮದುವೆ ಸಮಾರಂಭಗಳು ಮನೆಯಲ್ಲಿ ನಡೆಸಲು ಅವಕಾಶ ನೀಡಲಾಗಿದ್ದು 50 ಮಂದಿ ಮಾತ್ರ ಭಾಗವಹಿಸಬಹುದಾಗಿದೆ. ಅಂತರ್ ಜಿಲ್ಲೆಗಳಿಗೆ ಸಂಚಾರವನ್ನು ಹೊಸ ಮಾರ್ಗಸೂಚಿಯಲ್ಲಿ ನಿರ್ಬಂಧ ಹೇರಲಾಗಿದೆ. ಹೊಸತಾಗಿ ಜಾರಿಗೊಳ್ಳಲಿರುವ ಲಾಕ್‌ಡೌನ್‌ನನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸರ್ಕಾರ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿ ಮಾಡಿದ್ದರು ನಿಯಮ ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.