ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ರಾಜಕೀಯ ತ್ಯಜಿಸುವ ಸಾಧ್ಯತೆ: ಬಿ ವೈ ವಿಜಯೇಂದ್ರ

ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಕರ್ನಾಟಕದಲ್ಲಿ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿಲೆ, ಚುನಾವಣಾ ಫಲಿತಾಂಶದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನವದೆಹಲಿ: ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಕರ್ನಾಟಕದಲ್ಲಿ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿಲೆ, ಚುನಾವಣಾ ಫಲಿತಾಂಶದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಶುಕ್ರವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ಬಿಡುಗಡೆ ಮಾಡಿಲ್ಲ ಎಂಬ ಆರೋಪ ಸುಳ್ಳಾದರೆ ರಾಜಕೀಯ ತ್ಯಜಿಸುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ಈ ಹೇಳಿಕೆ ನೀಡಿದ್ದಾರೆ.
ಖಾತರಿಗಳಿಂದ ವಂಚಿತರಾದವರು ಸರ್ಕಾರವನ್ನು ಶಪಿಸುತ್ತಿದ್ದಾರೆ ಮತ್ತು ಅದು ಕಾಂಗ್ರೆಸ್ ಪಕ್ಷದ ಮೇಲೆ ತಿರುಗುಬಾಣ ಆಗಲಿದೆ. ಲೋಕಸಭಾ ಚುನಾವಣೆಯ ನಂತರ ಸರ್ಕಾರ ಪತನವಾಗಲಿದೆ ಎಂದು ಫೆಬ್ರವರಿ 1 ರಂದು ಹಾವೇರಿಯಲ್ಲಿ ಬೊಮ್ಮಾಯಿ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಹೇಳಿದ್ದು ಸುಳ್ಳಾದರೆ ರಾಜಕೀಯವನ್ನೇ ತೊರೆಯುತ್ತೇನೆ: ಸಿದ್ದರಾಮಯ್ಯ
ಸಿದ್ದರಾಮಯ್ಯ ರಾಜಕೀಯವನ್ನು ತೊರೆಯುತ್ತಾರೆ ಎಂದು ನಾನು ಹೇಳುತ್ತಿಲ್ಲ, ಲೋಕಸಭಾ ಚುನಾವಣೆಯ ನಂತರ ಸಿದ್ದರಾಮಯ್ಯನವರು ರಾಜಕೀಯ ತೊರೆಯುವ ಪರಿಸ್ಥಿತಿ ಬರಬಹುದು ಎಂದು ವಿಜಯೇಂದ್ರ ಮಾಧ್ಯಮಗಳಿಗೆ ಹೇಳಿದರು .
ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಭರವಸೆಗಳನ್ನು ಈಡೇರಿಸಿಲ್ಲ. ಸರ್ಕಾರದ ಲೋಪ ಮತ್ತು ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಕೇಂದ್ರ, ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ದೆಹಲಿಯಲ್ಲಿ ಪ್ರತಿಭಟನೆ ನಡೆಸುವುದು ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರುವುದಿಲ್ಲ. ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಹತಾಶರಾಗಿದ್ದಾರೆ ಎಂದು ಆರೋಪಿಸಿದರು.