ಲೋಕಸಭಾ ಚುನಾವಣೆಗೆ ಸಿದ್ಧತೆ: ಜನವರಿ 27ಕ್ಕೆ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು, ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.
ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ನಡೆಯಲಿರುವ ಸಭೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಆಗಮಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆಂದು ತಿಳಿಸಿದರು.
ಇದನ್ನೂ ಓದಿ: ಲೋಕಸಭಾ ಚುನಾವಣೆ: ಅನಂತಕುಮಾರ್ ಹೆಗಡೆ ಯೋಗ್ಯರಲ್ಲ; ಹೊಸಬರಿಗೆ ಅವಕಾಶ ಕೊಡಿ- ಹಿರಿಯ ಬಿಜೆಪಿ ಮುಖಂಡ
ಸಭೆಯಲ್ಲಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಚುನಾವಣಾ ಸಿದ್ಧತೆಗಳು ಮತ್ತು ಪ್ರಚಾರಗಳ ಕುರಿತು ಚರ್ಚಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಈ ಹಿಂದೆ, ಬಿಜೆಪಿ ಜನವರಿ 19 ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿತ್ತು. ಆದರೆ, ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಗೊಳಿಸಲಾಗಿತ್ತು.