ವಿಜಯ ಸಂಕೇಶ್ವರ ಅವರ ಬದುಕಿನ ಕಥೆ ‘ವಿಜಯಾನಂದ’ ಚಿತ್ರಕ್ಕೆ ಅದ್ಧೂರಿ ಮುಹೂರ್ತ

ಸಾರಿಗೆ, ಪತ್ರಿಕೋದ್ಯಮ, ಮಾಧ್ಯಮ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ವಿಜಯ ಸಂಕೇಶ್ವರ ಅವರ ಜೀವನ ಆಧರಿಸಿದ ಸಿನಿಮಾ ‘ವಿಜಯಾನಂದ’ ಚಿತ್ರಕ್ಕೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ‘ವಿಜಯಾನಂದ’ ಸಿನಿಮಾದ ಮುಹೂರ್ತ ಸಮಾರಂಭ ಇಂದು ಹುಬ್ಬಳ್ಳಿಯಲ್ಲಿ ಗ್ರ್ಯಾಂಡ್ ಆಗಿ ನೆರವೇರಿದೆ.

ವಿಜಯ ಸಂಕೇಶ್ವರ ಅವರ ಬದುಕಿನ ಕಥೆ ‘ವಿಜಯಾನಂದ’ ಚಿತ್ರಕ್ಕೆ ಅದ್ಧೂರಿ ಮುಹೂರ್ತ
Linkup
ಸಾರಿಗೆ, ಪತ್ರಿಕೋದ್ಯಮ, ಮಾಧ್ಯಮ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಅವರ ಜೀವನ ಆಧರಿಸಿದ ಸಿನಿಮಾ ‘’ ಚಿತ್ರಕ್ಕೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ‘ವಿಜಯಾನಂದ’ ಸಿನಿಮಾದ ಮುಹೂರ್ತ ಸಮಾರಂಭ ಇಂದು ಹುಬ್ಬಳ್ಳಿಯಲ್ಲಿ ಗ್ರ್ಯಾಂಡ್ ಆಗಿ ನೆರವೇರಿದೆ. ವಿಆರ್‌ಎಲ್ ಸಮೂಹದ ಮಾಲೀಕ ವಿಜಯ ಸಂಕೇಶ್ವರ ಅವರ ಹುಟ್ಟೂರಾದ ಹುಬ್ಬಳ್ಳಿಯಲ್ಲೇ ‘ವಿಜಯಾನಂದ’ ಸಿನಿಮಾದ ಮುಹೂರ್ತ ಇಂದು ಜರುಗಿತು. ‘ಕನ್ನಡ ಚಿತ್ರರಂಗದ ಭೀಷ್ಮ’ ಎಂದು ಪ್ರಖ್ಯಾತಿ ಪಡೆದಿದ್ದ ನಿರ್ದೇಶಕ ಜಿ.ವಿ.ಅಯ್ಯರ್ ಕುಟುಂಬದ ಕುಡಿ ರಿಶಿಕಾ ಶರ್ಮಾ ನಿರ್ದೇಶನದಲ್ಲಿ ‘ವಿಜಯಾನಂದ’ ಸಿನಿಮಾ ಮೂಡಿಬರಲಿದೆ. ವಿಆರ್‌ಎಲ್ ಫಿಲ್ಮ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ವಿಜಯ ಸಂಕೇಶ್ವರ ಅವರ ಪುತ್ರ ಆನಂದ ಸಂಕೇಶ್ವರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ ಸಂಕೇಶ್ವರ 1976 ರಲ್ಲಿ ಒಂದು ಟ್ರಕ್ ನಿಂದ ಶುರುವಾಗಿ, ಇವತ್ತಿಗೆ ಭಾರತದ ಅತಿದೊಡ್ಡ ಫ್ಲೀಟ್ ಮಾಲೀಕರಾಗಿ, ಪತ್ರಿಕೆ ಹಾಗೂ ಮಾಧ್ಯಮ ರಂಗದಲ್ಲಿ ನಡೆದು ಬಂದ ಡಾ.ವಿಜಯ ಸಂಕೇಶ್ವರ ಅವರ ಜೀವನಾಗಾಥೆಯನ್ನು ಆಧರಿಸಿದ ಚಿತ್ರವೇ ‘ವಿಜಯಾನಂದ’. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ನಿಹಾಲ್ ನಟನೆ ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಯುವ ಪ್ರತಿಭಾವಂತ ನಟ ನಿಹಾಲ್ ಅಭಿನಯಿಸುತ್ತಿದ್ದಾರೆ. ವಿಜಯ ಸಂಕೇಶ್ವರ ಅವರ ತಂದೆ ಬಿ.ಜಿ.ಸಂಕೇಶ್ವರ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್ ನಟಿಸುತ್ತಿದ್ದಾರೆ. ಇಷ್ಟು ದಿನ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದ ‘ವಿಜಯಾನಂದ’ ಚಿತ್ರ ಇಂದು ಸೆಟ್ಟೇರಿತು. ‘ವಿಜಯಾನಂದ’ ಚಿತ್ರದ ಮುಹೂರ್ತ ಸಮಾರಂಭಕ್ಕೆ ಕ್ರೇಜಿ ಸ್ಟಾರ್ ರವಿಚಂದ್ರನ್, ಗೋಲ್ಡನ್ ಸ್ಟಾರ್ ಗಣೇಶ್, ಉದ್ಯಮಿ ವಿಜಯ ಸಂಕೇಶ್ವರ, ಪುತ್ರ ಆನಂದ್ ಸಂಕೇಶ್ವರ ಮುಂತಾದವರು ಭಾಗಿಯಾಗಿದ್ದರು. ಮೊದಲ ದೃಶ್ಯಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಕ್ಲಾಪ್ ಇಂದು ನೆರವೇರಿದ ‘ವಿಜಯಾನಂದ’ ಚಿತ್ರದ ಮುಹೂರ್ತ ದೃಶ್ಯಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಕ್ಲಾಪ್ ಮಾಡಿ ಶುಭ ಹಾರೈಸಿದರು. ಮುಹೂರ್ತದ ದೃಶ್ಯದಲ್ಲಿ ನಿಹಾಲ್ ಮತ್ತು ಅನಂತ್ ನಾಗ್ ಅಭಿನಯಿಸಿದರು. ವಿಶೇಷ ಪಾತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ‘ವಿಜಯಾನಂದ’ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಕೂಡ ವಿಶೇಷ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ವಿಜಯ ಸಂಕೇಶ್ವರ ಅವರ ಸ್ನೇಹಿತರಾಗಿ ‘ವಿಜಯಾನಂದ’ ಸಿನಿಮಾದಲ್ಲಿ ರವಿಚಂದ್ರನ್ ಕಾಣಿಸಿಕೊಳ್ಳಲಿದ್ದಾರೆ. 1950 ರಿಂದ ಹಿಡಿದು 2017 ರವರೆಗೂ ವಿಜಯ ಸಂಕೇಶ್ವರ ಬದುಕಿನಲ್ಲಿ ಘಟಿಸಿದ ಪ್ರಮುಖ ಘಟನೆಗಳನ್ನು ‘ವಿಜಯಾನಂದ’ ಸಿನಿಮಾ ತೆರೆ ಮೇಲೆ ತರಲಿದೆ. ವಿಜಯ ಸಂಕೇಶ್ವರ ಅವರ ಜೀವನಚರಿತ್ರೆಯನ್ನು ಮೂರು ಶೇಡ್‌ನಲ್ಲಿ ತೆರೆಗೆ ತರಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ. ‘ವಿಜಯಾನಂದ’ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ಗದಗ್‌ನಲ್ಲಿ ನಡೆಯಲಿದ್ದು, ಅದಕ್ಕಾಗಿ ಚಿತ್ರತಂಡ ಸಾಕಷ್ಟು ಖರ್ಚು ಮಾಡಿ 70ರ ದಶಕದ ಬೃಹತ್ ಸೆಟ್‌ಅನ್ನೇ ನಿರ್ಮಿಸಿದೆ. ಇಂದಿನಿಂದ ಶೂಟಿಂಗ್ ಆರಂಭಿಸುವ ‘ವಿಜಯಾನಂದ’ ಸಿನಿಮಾ ಮುಂದಿನ ವರ್ಷ ತೆರೆಗೆ ಬರಲಿದೆ.