ವೈದ್ಯ ಸಮುದಾಯದೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಸಭೆ: ಲಸಿಕೆ ಅಭಿಯಾನಕ್ಕೆ ಒತ್ತು!

ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು(ಏ.19-ಸೋಮವಾರ) ದೇಶದ ವೈದ್ಯ ಸಮುದಾಯದೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದರು. ಈ ಸಾಂಕ್ರಾಮಿಕ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಸೇವೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ವೈದ್ಯ ಸಮುದಾಯದೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಸಭೆ: ಲಸಿಕೆ ಅಭಿಯಾನಕ್ಕೆ ಒತ್ತು!
Linkup
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು(ಏ.19-ಸೋಮವಾರ) ದೇಶದ ವೈದ್ಯ ಸಮುದಾಯದೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದರು. ಕೊರೊನಾ ಎರಡನೇ ಅಲೆ ತಡೆಗಟ್ಟುವ ವ್ಯಾಪಕ ಕ್ರಮಗಳ ಕುರಿತು ಚರ್ಚೆ ನಡೆಸಿದ ಪ್ರಧಾನಿ ಮೋದಿ, ಈ ಸಾಂಕ್ರಾಮಿಕ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿದರು. ದೇಶದ ವೈದ್ಯಕೀಯ ಸಿಬ್ಬಂದಿ ಕೊರೊನಾ ಸಂಕಷ್ಟದ ಕಾಲದಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ದೇಶ ಸದಾ ಸ್ಮರಿಸಲಿದೆ ಎಂದು ಹೇಳಿದರು. ದೇಶದ ವೈದ್ಯ ಸಿಬ್ಬಂದಿ ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಈ ಹೋರಾಟ ವ್ಯರ್ಥವಾಗುವುದಿಲ್ಲ. ನಾವು ಕೊರೊನಾ ವಿರುದ್ಧದ ಹೋರಾಟದಲ್ಲಿ ಜಯ ಸಾಧಿಸುವುದು ಖಚಿತ ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದರು. ಲಕ್ಷಾಂತರ ಜನರ ಪ್ರಾಣ ಉಳಿಸುವಲ್ಲಿ ಸಫಲವಾಗಿರುವ ವೈದ್ಯಕೀಯ ಸಿಬ್ಬಂದಿ ನಮ್ಮ ಕಣ್ಣ ಮುಂದಿರುವ ದೇವರು. ಅವರನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಪ್ರಧಾನಿ ಮೋದಿ ಹೇಳಿದರು. ಇನ್ನು ಕೊರೊನಾ ಲಸಿಕೆ ಅಭಿಯಾನವನ್ನು ದೇಶದ ಮೂಲೆ ಮೂಲೆಗೂ ತಲುಪಿಸುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ ಎಂದು ಹೇಳಿದ ಪ್ರಧಾನಿ ಮೋದಿ, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಲಸಿಕೆ ತಲುಪಬೇಕು ಎಂದು ಕರೆ ನೀಡಿದರು. ಇನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಕೇಂದ್ರ ಸಂಪುಟ ಸಭೆಯ ಹಿರಿಯ ಸದಸ್ಯರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.