ವಿಶೇಷ ರೈಲುಗಳ ಸಂಚಾರವನ್ನು ಮತ್ತೆ ಆರಂಭಿಸಿದ ಭಾರತೀಯ ರೈಲ್ವೆ

ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಕೆಲವು ರೈಲುಗಳ ಸಂಚಾರವನ್ನು ಮತ್ತೆ ಆರಂಭಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಅನೇಕ ಮೇಲ್‌ಗಳು ಹಾಗೂ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಮತ್ತೆ ಆರಂಭವಾಗಲಿದೆ.

ವಿಶೇಷ ರೈಲುಗಳ ಸಂಚಾರವನ್ನು ಮತ್ತೆ ಆರಂಭಿಸಿದ ಭಾರತೀಯ ರೈಲ್ವೆ
Linkup
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಕೆಲವು ರೈಲುಗಳ ಸಂಚಾರವನ್ನು ಮತ್ತೆ ಆರಂಭಿಸಲು ನಿರ್ಧರಿಸಿದೆ. ಕೋವಿಡ್ 2ನೇ ಅಲೆಯ ಕಾರಣದಿಂದಾಗಿ ಅನೇಕ ಮೇಲ್‌ಗಳು ಹಾಗೂ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ರದ್ದು ಮಾಡಲಾಗಿತ್ತು. ಇದೀಗ ಸೋಂಕು ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೆಲವು ವಿಶೇಷ ರೈಲುಗಳ ಸಂಚಾರ ಮತ್ತೆ ಆರಂಭವಾಗುತ್ತಿದೆ. ಇದೀಗ ಪೂರ್ವ ಹಾಗೂ ಪಶ್ವಿಮ ವಲಯ ರೈಲ್ವೆಯ ಅನೇಕ ರೈಲುಗಳ ಸಂಚಾರ ಮರುಆರಂಭ ಮಾಡಲು ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಸಂಬಂಧ ತಮ್ಮ ಟ್ವಿಟರ್‌ ಹ್ಯಾಂಡಲ್‌ಗಳಲ್ಲಿ ಮತ್ತೆ ಸಂಚಾರ ಆರಂಭಿಸಲಿರುವ ರೈಲುಗಳ ಪಟ್ಟಿಯನ್ನು ಘೋಷಿಸಿವೆ. ಈ ರೈಲುಗಳಿಗೆ ಟಿಕೆಟ್‌ ಬುಕ್‌ ಮಾಡಲು ಜೂನ್‌ 11ರಿಂದಲೇ ಅವಕಾಶ ನೀಡಲಾಗಿದೆ. ಪಿಆರ್‌ಎಸ್‌ ಕೌಂಟರ್‌ ಹಾಗೂ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಬಹುದಾಗಿದೆ.