ಶೋಪಿಯಾನ್‌ನಲ್ಲಿ ಸಿಆರ್‌ಪಿಎಫ್ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸೈನಿಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ತಂಡವೊಂದರ ಮೇಲೆ ನಾಲ್ವರು ಉಗ್ರರು ಮಂಗಳವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ಒಬ್ಬ ಸೈನಿಕನಿಗೆ ಗಾಯವಾಗಿದೆ.

ಶೋಪಿಯಾನ್‌ನಲ್ಲಿ ಸಿಆರ್‌ಪಿಎಫ್ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸೈನಿಕನಿಗೆ ಗಾಯ
Linkup
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪಡೆಯ ಮೇಲೆ ನಾಲ್ವರು ಶಂಕಿತ ಉಗ್ರರು ಗುಂಡಿನ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಯೋಧ ಗಾಯಗೊಂಡಿದ್ದಾನೆ. ಶೋಪಿಯಾನ್ ಜಿಲ್ಲೆಯ ಜೈನಾಪೊರದ ಕ್ರಾಲ್ಚೆಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅರೆಸೇನಾ ಪಡೆಯ ತಂಡದ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ 178 ಬೆಟಾಲಿಯನ್ ಸೈನಿಕ ಅಜಯ್ ಕುಮಾರ್ ಅವರ ಕೈಗೆ ಗಾಯವಾಗಿದೆ. ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಸಿಆರ್‌ಪಿಎಫ್ ಯೋಧರು ಪ್ರತಿ ದಾಳಿ ಆರಂಭಿಸಿದರು. ಪತ್ತೆ ಕಾರ್ಯಾಚರಣೆ ವೇಳೆ ಒಂದು ಭರ್ತಿಯಾದ ಮ್ಯಾಗಜಿನ್ ದೊರಕಿದೆ. ದಾಳಿಕೋರರನ್ನು ಹಿಡಿಯುವ ಸಲುವಾಗಿ ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾಶ್ಮೀರ ಪ್ರವಾಸ ಕೈಗೊಂಡಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶ್ರೀನಗರದಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿಯನ್ನು ರಾಹುಲ್ ಗಾಂಧಿ ಉದ್ಘಾಟಿಸಲಿದ್ದು, ಅದಕ್ಕೂ ಮುನ್ನ ಹಜ್ರತ್‌ಬಲ್ ಹಾಗೂ ತುಲ್ಮಲ್ ಗಂಡೆರ್ಬಲ್‌ನಲ್ಲಿರುವ ಮಾತಾ ಖೀರ್ ಭವಾನಿ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.