ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಶೋಭಾ ಕರಂದ್ಲಾಜೆ ಟ್ವೀಟ್‌ ಖಾತೆಯ ಎಲ್ಲ ಟ್ವೀಟ್‌ ಡಿಲೀಟ್‌!

ಹಲವಾರು ಬೆಳವಣಿಗೆಗಳ ಸಂದರ್ಭದಲ್ಲಿ ಕೋಮುಗಲಭೆ, ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಶೋಭಾ ಕರಂದ್ಲಾಜೆ ಟ್ವೀಟ್‌ ಖಾತೆಯ ಎಲ್ಲ ಟ್ವೀಟ್‌ ಡಿಲೀಟ್‌!
Linkup
ಹೊಸದಿಲ್ಲಿ: ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿಸುವುದು ಖಾತರಿಯಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ತಮ್ಮ ಟ್ವೀಟರ್‌ ಖಾತೆಯಲ್ಲಿನ ಎಲ್ಲ ಸಂದೇಶಗಳನ್ನು ಡಿಲೀಟ್‌ ಮಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ತಮ್ಮ ಟ್ವೀಟ್‌ ಖಾತೆಯಲ್ಲಿ ಶೋಭಾ ಕರಂದ್ಲಾಜೆ ಹಲವಾರು ವಿವಾದಾತ್ಮಕ ಸಂದೇಶಗಳನ್ನು ನೀಡಿದ್ದರು. ಸಚಿವರಾಗುತ್ತಾರೆ ಎಂಬ ವಿಷಯ ಖಾತರಿಯಾಗುತ್ತಿದ್ದಂತೆ ಮುಂದೆ ಯಾವುದೇ ರೀತಿಯ ವಿವಾದ ಆಗಬಾರದು ಎಂಬ ಉದ್ದೇಶದಿಂದ ಹಾಗೂ ಮುನ್ನೆಚ್ಚರಿಕೆಯಿಂದ ಈ ರೀತಿ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಹಲವಾರು ಬೆಳವಣಿಗೆಗಳ ಸಂದರ್ಭದಲ್ಲಿ ಕೋಮುಗಲಭೆ, ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಮಾಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸಚಿವರಾದ ನಂತರ ಯಾವುದೇ 'ಕಿರಿಕ್‌' ಆಗಬಾರದು ಎಂದು ಶೋಭಾ ಕರಂದ್ಲಾಜೆ ಎಲ್ಲ ಟ್ವೀಟ್‌ಗಳನ್ನು ಡಿಲೀಟ್‌ ಮಾಡಿದ್ದಾರೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆ ನಡೆಯುತ್ತಿದೆ.