ಸತತ ನಾಲ್ಕನೇ ಗೆಲುವು ದಾಖಲಿಸಿದ RCB: ಶಿಳ್ಳೆ ಹೊಡೆದ ಕಿಚ್ಚ ಸುದೀಪ್!

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ವಿಕೆಟ್‌ಗಳ ಜಯ ಸಾಧಿಸಿತು. ಆರ್‌ಸಿಬಿ ಗೆಲುವು ಪಡೆದಿದ್ದಕ್ಕೆ ಕಿಚ್ಚ ಸುದೀಪ್ ಖುಷಿ ಪಟ್ಟಿದ್ದಾರೆ.

ಸತತ ನಾಲ್ಕನೇ ಗೆಲುವು ದಾಖಲಿಸಿದ RCB: ಶಿಳ್ಳೆ ಹೊಡೆದ ಕಿಚ್ಚ ಸುದೀಪ್!
Linkup
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನಾಯಕತ್ವದ ತಂಡ ಶುಭಾರಂಭ ಮಾಡಿದೆ. ಇಲ್ಲಿಯವರೆಗೂ ಆಡಿರುವ ನಾಲ್ಕು ಪಂದ್ಯಗಳಲ್ಲಿ ನಾಲ್ಕು ಬಾರಿಯೂ ವಿರಾಟ್ ಕೊಹ್ಲಿ ಪಡೆ ಗೆಲುವು ಸಾಧಿಸಿದೆ. ಸತತ ನಾಲ್ಕು ಬಾರಿ ಗೆಲುವಿನ ನಗೆ ಬೀರಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಗುರುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ವಿಕೆಟ್‌ಗಳ ಜಯ ಸಾಧಿಸಿತು. ಮತ್ತು ವಿರಾಟ್ ಕೊಹ್ಲಿಯ ಬಿರುಸಿನ ಬ್ಯಾಟಿಂಗ್‌ನಿಂದ ಆರ್‌ಸಿಬಿಗೆ ಭರ್ಜರಿ ಜಯ ಸಿಕ್ತು. ಆರ್‌ಸಿಬಿ ಗೆಲುವು ಪಡೆದಿದ್ದಕ್ಕೆ ಶಿಳ್ಳೆ ಚಪ್ಪಾಳೆ ಹೊಡೆದಿದ್ದಾರೆ. ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿರುವ ಆರ್‌ಸಿಬಿ ಆಟದ ವೈಖರಿ ಬಗ್ಗೆ ಕಿಚ್ಚ ಸುದೀಪ್ ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಐಪಿಎಲ್ ವೃತ್ತಿ ಬದುಕಿನ ಮೊತ್ತ ಮೊದಲ ಶತಕ ಬಾರಿಸಿದ ದೇವದತ್ ಪಡಿಕ್ಕಲ್‌ಗೆ ಕಿಚ್ಚ ಸುದೀಪ್ ಶುಭಾಶಯ ತಿಳಿಸಿದ್ದಾರೆ. ಕಿಚ್ಚ ಸುದೀಪ್ ಟ್ವೀಟ್ ''ಆರ್‌ಸಿಬಿ ತಂಡದ ಅತ್ಯುತ್ತಮ ಸಾಧನೆಗೆ ಸಾಕ್ಷಿಯಾಗುತ್ತಿದ್ದೇವೆ. ನಾಲ್ಕಕ್ಕೆ ನಾಲ್ಕೂ ಗೆಲುವು.. ಎಂಥಾ ಮಜಾ.. ಎಂಥಾ ಶುಭಾರಂಭ. ಇದು ಅತ್ಯುತ್ತಮ ಆತ್ಮವಿಶ್ವಾಸವನ್ನು ನೀಡಬೇಕು. ನಿಸ್ವಾರ್ಥವಾಗಿ ಆಟವಾಡಿ ಮತ್ತೊಮ್ಮೆ ಅತ್ಯುತ್ತಮ ನಾಯಕ ಎಂಬುದನ್ನು ಪ್ರೂವ್ ಮಾಡಿದ ವಿರಾಟ್ ಕೊಹ್ಲಿಗೆ ಶುಭಾಶಯಗಳು. ದೇವದತ್ ಪಡಿಕ್ಕಲ್‌ಗೆ ಹ್ಯಾಟ್ಸ್ ಆಫ್. ನೀವು ಚಾಂಪಿಯನ್ ಎಂಬುದನ್ನು ಮತ್ತೆ ಪ್ರೂವ್ ಮಾಡಿದ್ರಿ. ಬಲಿಷ್ಠವಾಗಿ ಹೊರಹೊಮ್ಮಿ.. ಚಿಯರ್ಸ್'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್ ಪ್ರೇಮಿ ಸುದೀಪ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಉತ್ತಮ ಕ್ರಿಕೆಟಿಗ ಕೂಡ ಹೌದು. ಸಿಸಿಎಲ್‌ನಲ್ಲಿ ಕರ್ನಾಟಕ ಬುಲ್ದೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್. ಸಿಸಿಎಲ್ ಪಂದ್ಯಗಳಲ್ಲಿ ಕಿಚ್ಚ ಸುದೀಪ್ ಆಲ್‌ರೌಂಡ್ ಪ್ರದರ್ಶನ ನೀಡಿ ಎಲ್ಲರ ಮನ ಗೆದ್ದಿದ್ದಾರೆ. ವಿಶ್ರಾಂತಿ ಪಡೆಯುತ್ತಿದ್ದಾರೆ ಕಿಚ್ಚ ಸುದೀಪ್ ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವೈದ್ಯರ ಸಲಹೆ ಮೇರೆಗೆ ಶೂಟಿಂಗ್‌ನಿಂದ ಬ್ರೇಕ್ ಪಡೆದುಕೊಂಡ ಕಿಚ್ಚ ಸುದೀಪ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವಿಶ್ರಾಂತಿಯ ಅಗತ್ಯವಿರುವ ಕಾರಣ 'ಬಿಗ್ ಬಾಸ್' ವಾರಾಂತ್ಯದ ಸಂಚಿಕೆಗಳ ಚಿತ್ರೀಕರಣಕ್ಕೂ ಸುದೀಪ್ ಹಾಜರಾಗುತ್ತಿಲ್ಲ. ಮನೆಯಲ್ಲೇ ಇರುವ ಸುದೀಪ್ ಐಪಿಎಲ್ ಪಂದ್ಯಾವಳಿಗಳನ್ನು ವೀಕ್ಷಿಸುತ್ತ, ಆರ್‌ಸಿಬಿಗೆ ಹುರಿದುಂಬಿಸುತ್ತಿದ್ದಾರೆ. ಆರ್‌ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿ ಕಿಚ್ಚ ಸುದೀಪ್ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.