ಸತೀಶ್ ರೆಡ್ಡಿ ಮನೆಯ ಮುಂದಿದ್ದ ಕಾರು ಧ್ವಂಸ ಪ್ರಕರಣ: ಅಶ್ವತ್ಥ ನಾರಾಯಣ ಪ್ರತಿಕ್ರಿಯೆ ಏನು?

ಬಿಜೆಪಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಐಶಾರಾಮಿ ಕಾರುಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಈ ಕೃತ್ಯವನ್ನು ಯಾರು ಎಸಗಿದ್ದಾರೆ ಎಂಬುವುದು ಇನ್ನು ಸ್ಪಷ್ಟಗೊಂಡಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸತೀಶ್ ರೆಡ್ಡಿ ಮನೆಯ ಮುಂದಿದ್ದ ಕಾರು ಧ್ವಂಸ ಪ್ರಕರಣ: ಅಶ್ವತ್ಥ ನಾರಾಯಣ ಪ್ರತಿಕ್ರಿಯೆ ಏನು?
Linkup
ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಯ ಮುಂದಿದ್ದ ಐಶಾರಾಮಿ ಕಾರು ಧ್ವಂಸ ಪ್ರಕರಣ ಸಂಬಂಧಿಸಿದಂತೆ, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಸಚಿವ ಡಾ.‌ಅಶ್ವತ್ಥ ನಾರಾಯಣ ಹೇಳಿದರು. ವಿಧಾನಸೌಧದಲ್ಲಿ ಸಚಿವ ಡಾ.‌ ಅಶ್ವತ್ಥ ನಾರಾಯಣ ಪ್ರತಿಕ್ರಿಯೆ ನೀಡಿ, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಆಗಬೇಕು. ಈ ಘಟನೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ ಎಂದರು.‌ ಇಂತಹ ಸಮಸ್ಯೆಗಳು ನಿರ್ಮಾಣ ಆಗಬಾರದು. ಈ ರೀತಿಯ ಕೃತ್ಯ ಎಸಗಿದ ವ್ಯಕ್ತಿಗಳ ಬಂಧನ ತಕ್ಷಣ ಆಗಬೇಕು. ಯಾರ ಕೈವಾಡ ಇದೆ ಎಂಬುವುದನ್ನು ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು. ಘಟನೆಯ ಕುರಿತಾಗಿ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಜರಗಿಸಬೇಕು.‌ ಕಾನೂನು ಕೈಗೆತ್ತಿಕೊಂಡರನ್ನು ತಪ್ಪಿಸುಕೊಳ್ಳಲು ಬಿಡಲ್ಲ, ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದರು. ಬಿಜೆಪಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಐಶಾರಾಮಿ ಕಾರುಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಈ ಕೃತ್ಯವನ್ನು ಯಾರು ಎಸಗಿದ್ದಾರೆ ಎಂಬುವುದು ಇನ್ನು ಸ್ಪಷ್ಟಗೊಂಡಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.