ಸಿಬಿಐ ಎಫ್‌ಐಆರ್ ರದ್ದುಗೊಳಿಸುವ ಅರ್ಜಿ: ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್‌ಗೆ ಹಿನ್ನಡೆ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ಯ ಅವರು, ತಮ್ಮ ವಿರುದ್ಧದ ಸಿಬಿಐ ಎಫ್‌ಐಆರ್ ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.

ಸಿಬಿಐ ಎಫ್‌ಐಆರ್ ರದ್ದುಗೊಳಿಸುವ ಅರ್ಜಿ: ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್‌ಗೆ ಹಿನ್ನಡೆ
Linkup
ಮುಂಬಯಿ: ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಲ್ಲಿ ಸಿಲುಕಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಎನ್‌ಸಿಪಿ ನಾಯಕ ಅವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ರದ್ದುಗೊಳಿಸಲು ಗುರುವಾರ ನಿರಾಕರಿಸಿದೆ. ಇದರಿಂದ ಅನಿಲ್ ದೇಶ್‌ಮುಖ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ಈ ಅರ್ಜಿಯು ವಜಾಗೊಳ್ಳಲು ಅರ್ಹವಾಗಿದೆ ಎಂದು ನ್ಯಾಯಮೂರ್ತಿಗಳಾದ ಎಸ್ಎಸ್ ಶಿಂಧೆ ಮತ್ತು ಎನ್‌ಜೆ ಜಮಾದಾರ್ ಅವರನ್ನು ಒಳಗೊಂಡ ನ್ಯಾಯಪೀಠ ಆದೇಶ ಹೊರಡಿಸಿದೆ. ಜುಲೈ 12ರಂದು ತೀರ್ಪು ಕಾಯ್ದಿರಿಸಿದ್ದ ಬಾಂಬೆ ಹೈಕೋರ್ಟ್, ಈವರೆಗೆ ನಡೆಸಿದ ತನಿಖೆಯ ವರದಿಯನ್ನು ಸಲ್ಲಿಕೆ ಮಾಡುವಂತೆ ಸಿಬಿಐಗೆ ನಿರ್ದೇಶಿಸಿತ್ತು. ಗುರುವಾರ ತೀರ್ಪು ಪ್ರಕಟಿಸಿದ ನ್ಯಾಯಪೀಠ, ತನಿಖೆಯ ದಾಖಲೆಗಳನ್ನು ಸಿಬಿಐಗೆ ಮರಳಿಸುವಂತೆ ರಿಜಿಸ್ಟರ್ ಜನರಲ್‌ಗೆ ಸೂಚನೆ ನೀಡಿತು. ದೇಶ್‌ಮುಖ್ ಪರ ಹಾಜರಾದ ಹಿರಿಯ ವಕೀಲ ಅಮಿತ್ ದೇಸಾಯಿ, ಸೂಕ್ತ ಹೆಜ್ಜೆಗಳನ್ನು ಇರಿಸಲು ಅಧ್ಯಯನ ನಡೆಸುವ ಅಗತ್ಯವಿರುವ ಮಹತ್ವದ ಕಾನೂನು ಪ್ರಶ್ನೆಗಳನ್ನು ಇದು ಒಳಗೊಂಡಿರುವುದರಿಂದ ತನಿಖೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ಸಿಬಿಐ ಪರ ಹಾಜರಾದ ತುಷಾರ್ ಮೆಹ್ತಾ, ಇದರಲ್ಲಿ ಕಾನೂನಿನ ಯಾವುದೇ ಪ್ರಶ್ನೆ ಇಲ್ಲ ಎಂದು ವಾದಿಸಿದರು. ತಮ್ಮ ವಿರುದ್ಧ ಪ್ರಕರಣ ದಾಖಲಾಗುವ ವೇಳೆ ತಾವು ಸಾರ್ವಜನಿಕ ಸೇವೆಯಲ್ಲಿ ಇದ್ದಿದ್ದರಿಂದ ದಾಖಲಿಸಲು ಸೂಕ್ತ ಪೂರ್ವಾನುಮತಿ ಪಡೆದುಕೊಳ್ಳಬೇಕಿತ್ತು. ಆದರೆ ಸಿಬಿಐ ಇದರಲ್ಲಿ ವಿಫಲವಾಗಿದೆ ಎಂದು ಅನಿಲ್ ದೇಶ್‌ಮುಖ್ ಆರೋಪಿಸಿದ್ದರು. ಆರೋಪಗಳು ಸುಳ್ಳಾಗಿರುವ ಸಾಧ್ಯತೆ ಇರುವುದರಿಂದ ರಾಜ್ಯದಿಂದ ಅನುಮತಿ ಪಡೆಯಲು ಅರ್ಜಿ ಸಲ್ಲಿಸುವುದು ಸಿಬಿಐ ಕರ್ತವ್ಯವಾಗಿತ್ತು ಎಂದು ಅವರು ವಾದಿಸಿದ್ದರು. ಆದರೆ, ಇದನ್ನು ಕೋರ್ಟ್ ಗಣನೆಗೆ ತೆಗೆದುಕೊಳ್ಳಲಿಲ್ಲ.