ಸಮಸ್ಯೆಗಳಿಗೆ ಸ್ಪಂದಿಸದೆ ಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿದರೆ ಜನರು ಚಪ್ಪಲಿಯಿಂದ ಹೊಡೆಯುತ್ತಾರೆ!: ಕಾಂಗ್ರೆಸ್ ವಿರುದ್ಧ ಠಾಕ್ರೆ ಪರೋಕ್ಷ ಕಿಡಿ

ಮುಂದಿನ ಮುಂಬಯಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.

ಸಮಸ್ಯೆಗಳಿಗೆ ಸ್ಪಂದಿಸದೆ ಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿದರೆ ಜನರು ಚಪ್ಪಲಿಯಿಂದ ಹೊಡೆಯುತ್ತಾರೆ!: ಕಾಂಗ್ರೆಸ್ ವಿರುದ್ಧ ಠಾಕ್ರೆ ಪರೋಕ್ಷ ಕಿಡಿ
Linkup
ಮುಂಬಯಿ: ಜನರ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸದೆ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದರ ಬಗ್ಗೆ ಮಾತ್ರವೇ ಮಾತನಾಡುತ್ತಿರುವವರಿಗೆ 'ಜನರು ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮುಖ್ಯಮಂತ್ರಿ , ಪರೋಕ್ಷವಾಗಿ ನಾಯಕರತ್ತ ಚಾಟಿ ಬೀಸಿದ್ದಾರೆ. ಶಿವಸೇನಾದ 55ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ರಾಜಕೀಯ ಪಕ್ಷಗಳೂ ತಮ್ಮ ಮಹತ್ವಾಕಾಂಕ್ಷೆಗಳನ್ನು ಪಕ್ಕಕ್ಕಿಟ್ಟು ಆರ್ಥಿಕತೆ ಮತ್ತು ಆರೋಗ್ಯದ ಮೇಲೆ ಗಮನ ಹರಿಸಬೇಕು ಎಂದು ಉದ್ಧವ್ ಹೇಳಿದ್ದಾರೆ. ರಾಜ್ಯದಲ್ಲಿನ ತನ್ನ ಮಿತ್ರಪಕ್ಷ ಕಾಂಗ್ರೆಸ್ ಅನ್ನು ನೇರವಾಗಿ ಉಲ್ಲೇಖಿಸದ ಠಾಕ್ರೆ, 'ನಾವು ಜನರ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕದೆ, ಕೇವಲ ರಾಜಕೀಯದ ಬಗ್ಗೆಯೇ ಮಾತನಾಡುತ್ತಿದ್ದರೆ ಜನರು ನಮಗೆ ಚಪ್ಪಲಿಯಲ್ಲಿ ಹೊಡೆಯುತ್ತಾರೆ. ಅವರು ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಮ್ಮ ಪಕ್ಷ ಕೇಂದ್ರಿತ, ಮಹತ್ವಾಕಾಂಕ್ಷೆಯ ಮಾತುಗಳನ್ನು ಕೇಳಿಸಿಕೊಳ್ಳುವುದಿಲ್ಲ' ಎಂದು ವ್ಯಂಗ್ಯವಾಡಿದರು. ಮುಂದಿನ ವರ್ಷ ನಡೆಯಲಿರುವ ಮುಂಬಯಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜತೆ ಕೈಜೋಡಿಸದೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮುಂಬಯಿ ಕಾಂಗ್ರೆಸ್ ಮುಖ್ಯಸ್ಥ ಭಾಯ್ ಜಗ್ಪಲ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. 'ಪಕ್ಷವೊಂದು ತಾನು ಇತರರೊಂದಿಗೆ ಕೈಜೋಡಿಸದೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಲು ಬಯಸುವುದಾದರೆ, ಅದು ಜನರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಜನರು ತಮ್ಮ ಜೀವನೋಪಾಯ, ಕೆಲಸಗಳನ್ನು ಒದಗಿಸಲು ಪಕ್ಷವು ಯಾವ ಯೋಜನೆ ಹೊಂದಿದೆ ಎಂದು ಜನರು ಪ್ರಶ್ನಿಸುತ್ತಾರೆ' ಎಂದು ಠಾಕ್ರೆ ಹೇಳಿದ್ದಾರೆ. 'ಶಿವಸೇನಾ ಅಧಿಕಾರಕ್ಕಾಗಿ ಹಪಹಪಿಸುತ್ತಿಲ್ಲ. ಇತರರ ಭಾರವನ್ನು ನಾವು ಅನಗತ್ಯವಾಗಿ ಹೊರುವುದಿಲ್ಲ. ನಾವು ಜನಸಾಮಾನ್ಯರ ಹಿತರಕ್ಷಣೆಗಾಗಿ ಯಾವಾಗಲೂ ದೃಢ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ಕೂಡ ಮೈತ್ರಿಗಳಿಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸುವ ಘೋಷಣೆ ಮಾಡಬಹುದು' ಎಂದಿದ್ದಾರೆ.