''ಸ್ವಂತ ಖರ್ಚಿನಲ್ಲಿ ಪ್ರತಿದಿನ ಆಕ್ಸಿಜನ್ ತಲುಪಿಸುವ ವ್ಯವಸ್ಥೆ ಮಾಡಿದ್ದೇನೆ'' - ಸುಮಲತಾ

ಮಂಡ್ಯದಲ್ಲಿ ಆಕ್ಸಿಜನ್ ಕೊರತೆ ಇದ್ದು, ಅದನ್ನು ನೀಗಿಸುವ ನಿಟ್ಟಿನಲ್ಲಿ ಮಂಡ್ಯ ಸಂಸದೆ ಸುಮಲತಾ ಹೆಜ್ಜೆ ಇಟ್ಟಿದ್ದಾರೆ. ಸ್ವಂತ ಖರ್ಚಿನಲ್ಲಿ ಪ್ರತಿದಿನ ಆಕ್ಸಿಜನ್ ತಲುಪಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ಸುಮಲತಾ ತಿಳಿಸಿದ್ದಾರೆ.

''ಸ್ವಂತ ಖರ್ಚಿನಲ್ಲಿ ಪ್ರತಿದಿನ ಆಕ್ಸಿಜನ್ ತಲುಪಿಸುವ ವ್ಯವಸ್ಥೆ ಮಾಡಿದ್ದೇನೆ'' - ಸುಮಲತಾ
Linkup
ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ಭಾರತ ತತ್ತರಿಸಿದ್ದು, ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಸಿಗದೆ, ಇಲ್ಲದೆ ಒದ್ದಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ, ತಮ್ಮ ಕ್ಷೇತ್ರದ ಜನರ ಜೀವ ಉಳಿಸುವ ಕಾರ್ಯಕ್ಕೆ ನಟಿ ಹಾಗೂ ಸಂಸದೆ ಪಣತೊಟ್ಟಿದ್ದಾರೆ. ಮಂಡ್ಯದಲ್ಲಿ ಆಕ್ಸಿಜನ್ ಕೊರತೆ ಇದ್ದು, ಅದನ್ನು ನೀಗಿಸುವ ನಿಟ್ಟಿನಲ್ಲಿ ಸುಮಲತಾ ಹೆಜ್ಜೆ ಇಟ್ಟಿದ್ದಾರೆ. ಸ್ವಂತ ಖರ್ಚಿನಲ್ಲಿ ಪ್ರತಿದಿನ ಆಕ್ಸಿಜನ್ ತಲುಪಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ಸುಮಲತಾ ತಿಳಿಸಿದ್ದಾರೆ. ಜೊತೆಗೆ ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು-ನೋವು ಜಿಲ್ಲೆಯಲ್ಲಿ ಸಂಭವಿಸದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸುಮಲತಾ ಟ್ವೀಟ್ ''ಮಂಡ್ಯದಲ್ಲಿ ದಿನವೊಂದಕ್ಕೆ 3,000 ಲೀಟರ್ ಆಕ್ಸಿಜನ್ ಕೊರತೆ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಈ ವರ್ಷ ಎಂ.ಪಿ ಫಂಡ್ ಇಲ್ಲ. ಸರ್ಕಾರಿ ಅನುದಾನ ಮೂಲಗಳು ಬರುವವರೆಗೂ ಕಾಯುವಂತಹ ಸ್ಥಿತಿಯಲ್ಲಿ ನಾವಿಲ್ಲ. ಅಲ್ಲಿಯವರೆಗೂ ಪ್ರತಿದಿನ 2,000 ಲೀಟರ್ ಆಕ್ಸಿಜನ್ ಸ್ವಂತ ಖರ್ಚಿನಲ್ಲಿ ತಲುಪಿಸುವ ವ್ಯವಸ್ಥೆ ಮಾಡಿದ್ದೇನೆ. ಇದು ನನ್ನ ಕರ್ತವ್ಯ'' ಎಂದು ಸುಮಲತಾ ಟ್ವೀಟಿಸಿದ್ದಾರೆ. ಜೊತೆಗೆ, ''ಆಕ್ಸಿಜನ್ ಸಿಲಿಂಡರ್‌ಗಳನ್ನು ತುಂಬಿಸುವುದಕ್ಕೆ ಹಾಸನ, ಮೈಸೂರು ಹಾಗೂ ರಾಮನಗರಗಳಿಗೆ ಹೋಗಬೇಕಾದ ಪರಿಸ್ಥಿತಿ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಈ ಪರಿಸ್ಥಿತಿಯನ್ನು ಹೀಗೇ ಮುಂದುವರೆಯಲು ಬಿಡಲು ಆಗುವುದಿಲ್ಲ. ಮಂಡ್ಯಕ್ಕೆ ತನ್ನದೇ ಆಕ್ಸಿಜನ್ ಘಟಕ ಬೇಕು. ಇದು ಅತ್ಯಂತ ಶೀಘ್ರದಲ್ಲಿ ಸ್ಥಾಪನೆ ಆಗಬೇಕು ಎಂದು ನಿರ್ದೇಶನ ಕೊಟ್ಟಿದ್ದೇನೆ. ಜಿಲ್ಲಾಧಿಕಾರಿಗಳಿಗೆ ಆಕ್ಸಿಜನ್ ಘಟಕ ಸ್ಥಾಪನೆಗೆ ಕೊಡಬೇಕಾಗಿರುವ ಸೌಲಭ್ಯಗಳು ಮತ್ತು ಅನುಮತಿಗಳನ್ನೂ ಅತಿ ಶೀಘ್ರದಲ್ಲಿ ಜಾರಿ ಮಾಡುವಂತೆ ತಿಳಿಸಿದ್ದೇನೆ. ಕೋವಿಡ್ ಮೂರನೇ ಅಲೆ ಬರುವ ಮುಂಚೆ 13 ಸಾವಿರ ಲೀಟರ್ ಆಕ್ಸಿಜನ್ ಸಾಮರ್ಥ್ಯ ಪಡೆಯುವತ್ತ ಜಿಲ್ಲೆ ಹೆಜ್ಜೆ ಹಾಕಿದೆ'' ಎಂದು ಸುಮಲತಾ ಮಾಹಿತಿ ನೀಡಿದ್ದಾರೆ. ಸುಮಲತಾ ಅವರ ಈ ನಡೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ''ನಿಮ್ಮ ಕಾಯಕ ಇತರೆ ರಾಜಕಾರಣಿಗಳಿಗೂ ಸ್ಫೂರ್ತಿಯಾಗಿರಲಿ'' ಎಂದು ಟ್ವೀಟಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ.