ಸುವೇಂದು ಅಧಿಕಾರಿ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಕೋಲ್ಕೊತಾ ಹೈಕೋರ್ಟ್‌ ಸಮ್ಮತಿ

ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ಕೇವಲ 1,956 ಮತಗಳ ಅಂತರದಿಂದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿ ದೀದಿ ಕೋಲ್ಕೊತಾ ಹೈಕೋರ್ಟ್‌ ಮೊರೆ ಹೋಗಿದ್ದರು.

ಸುವೇಂದು ಅಧಿಕಾರಿ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಕೋಲ್ಕೊತಾ ಹೈಕೋರ್ಟ್‌ ಸಮ್ಮತಿ
Linkup
ಕೋಲ್ಕೊತಾ: ವಿಧಾನಸಭೆ ಪ್ರತಿಪಕ್ಷ ನಾಯಕರಾಗಿರುವ ಬಿಜೆಪಿ ಮುಖಂಡ ಆಯ್ಕೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಬುಧವಾರ ಸಮ್ಮತಿಸಿದೆ. ಚುನಾವಣೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇವಿಎಂಗಳನ್ನು ಸಂರಕ್ಷಿಸಿ ಇಡುವಂತೆ ಚುನಾವಣೆ ಆಯೋಗಕ್ಕೆ ಸೂಚನೆ ನೀಡಿದ್ದು, ಆ.12ರಂದು ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ನಂದಿಗ್ರಾಮದಲ್ಲಿ ಸುವೇಂದು ಅವರು 1,956 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅದನ್ನು ಪ್ರಶ್ನಿಸಿ ಮಮತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಕೌಶಿಕ್‌ ಚಂದಾ ಹಿಂದೆ ಸರಿದಿದ್ದರು. ಹೀಗಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ಅವರು ಪ್ರಕರಣವನ್ನು ಜಸ್ಟೀಸ್‌ ಶಂಪಾ ಸರ್ಕಾರ್‌ ಅವರ ಪೀಠಕ್ಕೆ ವರ್ಗಾಯಿಸಿದೆ. ಈ ನಡುವೆ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಸುವೇಂದು ಅಧಿಕಾರಿ ತಿಳಿಸಿದ್ದಾರೆ. ಟಿಎಂಸಿ ಅಸಮಾಧಾನಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ತೃಣಮೂಲ ಕಾಂಗ್ರೆಸ್‌, ಈ ಸಂಬಂಧ ಗುರುವಾರ ಆಯೋಗಕ್ಕೆ ಅಧಿಕೃತ ಮನವಿ ಸಲ್ಲಿಸುವುದಾಗಿ ತಿಳಿಸಿದೆ. ಐದು ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ಅಭ್ಯರ್ಥಿಗಳ ನಿಧನದಿಂದ ಮತದಾನ ರದ್ದಾಗಿದ್ದ ಎರಡು ಕ್ಷೇತ್ರಗಳಿಗೆ ಹೊಸದಾಗಿ ಚುನಾವಣೆ ನಡೆಯಬೇಕಿದೆ. ನಂದಿಗ್ರಾಮದಲ್ಲಿಸುವೇಂದು ಅಧಿಕಾರಿ ಎದುರು ಸೋತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನ.4ರ ಒಳಗೆ ಶಾಸಕರಾಗಿ ಆಯ್ಕೆಯಾಗಬೇಕಿದೆ. ವಿಧಾನ ಪರಿಷತ್‌ ರಚನೆಗೆ ವಿಧಾನಸಭೆ ಅಂಗೀಕಾರ ನೀಡಿದ್ದರೂ, ಈ ಪ್ರಕ್ರಿಯೆ ನ.4ರ ಒಳಗೆ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲ. ಹೀಗಾಗಿ ಉಪ ಚುನಾವಣೆಯಲ್ಲಿ ಗೆಲ್ಲುವುದೊಂದೇ ಸದ್ಯ ಮಮತಾ ಎದುರಿಗಿರುವ ಪರಿಹಾರವಾಗಿದೆ.