ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಎಡಿಜಿಪಿ ಭಾಸ್ಕರ್ ರಾವ್: ರಾಜಕೀಯ ಪ್ರವೇಶಕ್ಕೆ ಸಿದ್ಧತೆ?

ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ, ರೈಲ್ವೆ ವಿಭಾಗದ ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ನೀಡುವಂತೆ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅವರು ಅಧಿಕಾರಾವಧಿ ಇನ್ನೂ ಮೂರು ವರ್ಷವಿದೆ.

ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಎಡಿಜಿಪಿ ಭಾಸ್ಕರ್ ರಾವ್: ರಾಜಕೀಯ ಪ್ರವೇಶಕ್ಕೆ ಸಿದ್ಧತೆ?
Linkup
ಬೆಂಗಳೂರು: ರೈಲ್ವೆ ವಿಭಾಗದ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಐಪಿಎಸ್ ಅಧಿಕಾರಿ ಅವರು ಸ್ವಯಂ ನಿವೃತ್ತಿಯನ್ನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿರುವ ಅವರು ತಮ್ಮ ನಿವೃತ್ತಿ ಅವಧಿ ಪೂರ್ಣಗೊಳ್ಳಲು ಇನ್ನೂ ಮೂರು ವರ್ಷಗಳು ಬಾಕಿ ಇರುವಾಗಲೇ ಪೊಲೀಸ್ ಸೇವೆಯಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಅವರು ಗುರುವಾರ ಬೆಳಿಗ್ಗೆ ಸರ್ಕಾರಕ್ಕೆ ಸಂಬಂಧ ಮನವಿ ಸಲ್ಲಿಸಿದ್ದಾರೆ. 1990ರ ಕರ್ನಾಟಕ ಕೇಡರ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್, ವಿಆರ್‌ಎಸ್ ತೆಗೆದುಕೊಳ್ಳುವ ಹಠಾತ್ ನಿರ್ಧಾರಕ್ಕೆ ಬಂದಿರುವುದರ ಹಿಂದಿನ ಕಾರಣ ಸ್ಪಷ್ಟವಾಗಿಲ್ಲ. ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅರ್ಥಶಾಸ್ತ್ರ ವಿಷಯದಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ನಗರ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು. ತಮ್ಮ ಒಟ್ಟಾರೆ ಅವಧಿ ಪೂರ್ಣಗೊಳ್ಳುವ ಮುನ್ನವೇ ನಿವೃತ್ತಿ ನೀಡುವಂತೆ ಅವರು ರಾಜ್ಯ ಸರ್ಕಾರ, ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ. 1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಎಡಿಜಿಪಿ ಸಂಜಯ್ ಸಹಾಯ್ ಅವರೂ ಸ್ವಯಂ ನಿವೃತ್ತಿ ಪಡೆದಿದ್ದರು. ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಪಡೆದು ರಾಜಕೀಯಕ್ಕೆ ಬರಲು ಉದ್ದೇಶಿಸಿದ್ದಾರೆ ಎನ್ನಲಾಗುತ್ತಿದೆ. ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಆಮ್ ಆದ್ಮಿ ಪಕ್ಷದಿಂದ ಟಿಕೆಟ್ ಪಡೆದು ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂದು ಹೇಳಲಾಗುತ್ತಿದೆ.