ಹಿಮಾಂತ ಬಿಸ್ವ ಶರ್ಮಾ ಅಸ್ಸಾಂನ ನೂತನ ಮುಖ್ಯಮಂತ್ರಿ

ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಗುವಾಹಟಿಯಲ್ಲಿ ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶರ್ಮಾ ಅವರ ಹೆಸರನ್ನು ನಿರ್ಗಮಿತ ಸಿಎಂ ಸರ್ಬಾನಂದ ಸೋನೊವಾಲ್ ಸೂಚಿಸಿದರು.

ಹಿಮಾಂತ ಬಿಸ್ವ ಶರ್ಮಾ ಅಸ್ಸಾಂನ ನೂತನ ಮುಖ್ಯಮಂತ್ರಿ
Linkup
ಗುವಾಹಟಿ: ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಅವರು ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಹಿಮಾಂತ ಶರ್ಮಾ ಅವರನ್ನು ಹುದ್ದೆಗೆ ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಅನುಮೋದನೆ ನೀಡಿದ ಬಳಿಕ ಗುವಾಹಟಿಯಲ್ಲಿ ಭಾನುವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಸೋನೊವಾಲ್ ಅವರು ಶರ್ಮಾ ಹೆಸರು ಪ್ರಸ್ತಾಪಿಸಿದರು. ಇದಕ್ಕೆ ಶಾಸಕರು ಸಹಮತ ವ್ಯಕ್ತಪಡಿಸಿದರು. ಇತ್ತೀಚೆಗೆ ಮುಕ್ತಾಯವಾದ ವಿಧಾನಸಭೆ ಚುನಾವಣೆಯಲ್ಲಿ ಸತತ ಎರಡನೆಯ ಅವಧಿಗೆ ಅಧಿಕಾರಕ್ಕೆ ಬಂದಿತ್ತು. 126 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 60 ಸೀಟುಗಳಲ್ಲಿ ಜಯಭೇರಿ ಬಾರಿಸಿತ್ತು. ಅದರ ಮಿತ್ರ ಪಕ್ಷಗಳಾದ ಎಜಿಪಿ 9 ಸೀಟುಗಳು ಮತ್ತು ಯುಪಿಪಿಎಲ್ ಆರು ಸೀಟುಗಳಲ್ಲಿ ಜಯಗಳಿಸಿದ್ದವು. 2016ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋನೊವಾಲ್ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿ ಗೆಲುವು ಕಂಡು, ಈಶಾನ್ಯ ರಾಜ್ಯದಲ್ಲಿ ತನ್ನ ಮೊದಲ ಸರ್ಕಾರ ರಚಿಸಿತ್ತು. ಈ ಬಾರಿ ಅದು ಚುನಾವಣೆಯ ಬಳಿಕ ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸುವುದಾಗಿ ಹೇಳಿತ್ತು. ಶರ್ಮಾ ಅವರು ಕಳೆದ ಆರು ವರ್ಷದ ಹಿಂದೆ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಸೋನೊವಾಲ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. 2015ರಲ್ಲಿ ಕಾಂಗ್ರೆಸ್‌ನ ತರುಣ್ ಗೊಗೊಯ್ ಸರ್ಕಾರದಿಂದ ಹೊರನಡೆದು ಬಿಜೆಪಿ ಸೇರಿದ್ದ ಶರ್ಮಾ, ಅಸ್ಸಾಂನಲ್ಲಿ ಬಿಜೆಪಿಯ ಬೆಳವಣಿಗೆಯಲ್ಲಿ ಬಹು ಪ್ರಮುಖ ಪಾತ್ರವಹಿಸಿದ್ದರು. ಮರು ವರ್ಷವೇ ಬಿಜೆಪಿ ಈಶಾನ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತ್ತು.